Saturday, May 18, 2024

ಪ್ರಾಯೋಗಿಕ ಆವೃತ್ತಿ

₹ 150 ಕೋಟಿ ವೆಚ್ಚದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿಗೆ ಮೂಲಸೌಕರ್ಯ – ಸಿಎಂ ಸಿದ್ದರಾಮಯ್ಯ

ಬೆಂಗಳೂರ-ಮೈಸೂರು ಹೆದ್ದಾರಿಯ ಬಾಕಿ ಉಳಿದಿರುವ ಸರ್ವೀಸ್ ರಸ್ತೆ ಕಾಮಗಾರಿ ಸೇರಿದಂತೆ ಇನ್ನಿತರ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರಕ್ಕೆ ₹150 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದು ಮಂಜೂರಾದ ತಕ್ಷಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶನಿವಾರ ಮಂಡ್ಯ ತಾಲ್ಲೂಕಿನ ಉಮ್ಮಡಹಳ್ಳಿ ಗೇಟ್ ಬಳಿ ಹೆದ್ಧಾರಿಯ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆದ್ದಾರಿಯಲ್ಲಿ ವಾಹನಗಳ ಸಂಚಾರಕ್ಕೆ ವೇಗಮಿತಿ ಇಲ್ಲದ ಕಾರಣ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದವು, ಜೂನ್ ತಿಂಗಳಲ್ಲೇ ಸುಮಾರು 20ಕ್ಕೂ ಹೆಚ್ಚು ಅಪಘಾತ ಆಗಿದ್ದವು. ಇದೀಗ ಪೋಲಿಸ್ ಇಲಾಖೆ ವಾಹನಗಳ ವೇಗಕ್ಕೆ ಕಡಿವಾಣ ಹಾಕಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ಅಪಘಾತ ಪ್ರಮಾಣ ಕಡಿಮೆಯಾಗಿದೆ ಎಂದರು.

ಸದ್ಯದಲ್ಲೇ ದೆಹಲಿಗೆ ಭೇಟಿ ನೀಡಿ ಕೇಂದ್ರದ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಗುವುದು. ಹೆದ್ದಾರಿ ವ್ಯಾಪ್ತಿಯ ನಗರಗಳಲ್ಲಿ ಬೈಪಾಸ್ ರಸ್ತೆ, ಅಂಡರ್ ಪಾಸ್, ಮೂಲಸೌಕರ್ಯ ಅಷ್ಟೇ ಅಲ್ಲದೆ ಸರ್ವಿಸ್ ರಸ್ತೆ ಸಮರ್ಪಕ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಉಡುಪಿಯಲ್ಲಿ ಕಾಲೇಜು ವಿದ್ಯಾರ್ಥಿಗಳ ವಿಡಿಯೋ ಚಿತ್ರೀಕರಣದ ಬಗ್ಗೆ ಪೊಲೀಸರು ಎಫ್ಐಆರ್ ದಾಖಲೆಸಿದ್ದು. ತನಿಖೆ ಪ್ರಗತಿಯಲ್ಲಿದೆ, ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು, ಬಿಜೆಪಿ ಪಕ್ಷದವರು  ಎಲ್ಲದರಲ್ಲೂ ರಾಜಕಾರಣ ಮಾಡುತ್ತಾರೆ ಎಂದು ಕಿಡಿಕಾರಿದರು.

ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾಧಿಕಾರಿ ಡಾ. ಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜು, ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!