ರಾಜ್ಯದ ಕರಾವಳಿ ಭಾಗದಲ್ಲಿ ನಡೆದ ಕೋಮು ದಳ್ಳುರಿಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬದವರಿಗೆ ಯಾವುದೇ ತಾರತಮ್ಯವಿಲ್ಲದೇ ತಲಾ ₹ 25 ಲಕ್ಷ ಪರಿಹಾರ ನೀಡಲಾವುದು ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ.
ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಸಿಎಂ @siddaramaiah ಘೋಷಿಸಿದ್ದಾರೆ.… pic.twitter.com/5auLtH7s5I
— Karnataka Congress (@INCKarnataka) June 17, 2023
“>
‘ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು’ ಎಂಬ ತತ್ವದೊಂದಿಗೆ ಮುನ್ನೆಡೆಯುವ ನಮ್ಮ ಸರ್ಕಾರದಲ್ಲಿ ತಾರತಮ್ಯಕ್ಕೆ ಆಸ್ಪದವಿಲ್ಲ. ಬಿಜೆಪಿ ಅವಧಿಯಲ್ಲಿ ಕೋಮು ಕಿಚ್ಚಿಗೆ ಬಲಿಯಾದ ಮಸೂದ್, ಫಾಜಿಲ್, ಜಲೀಲ್ ಹಾಗೂ ದೀಪಕ್ ರಾವ್ ಅವರ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಗಳನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ಟ್ವೀಟ್ ಮಾಡಿದೆ.





