Tuesday, November 24, 2026

ಪ್ರಾಯೋಗಿಕ ಆವೃತ್ತಿ

ಭಾಗ್ಯಜ್ಯೋತಿ-ಕುಟೀರ ಜ್ಯೋತಿ ಫಲಾನುಭವಿಗಳ ₹ 389 ಕೋಟಿ ಬಿಲ್ ಬಾಕಿ ಮನ್ನಾ: ಸಿಎಂ ಸಿದ್ದರಾಮಯ್ಯ

ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ ರೂ.389 ಕೋಟಿ ಬಾಕಿ ಬಿಲ್‌ ಇದ್ದು, ಈ ಬಿಲ್ ಬಾಕಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮನ್ನಾ ಮಾಡಿದ್ದಾರೆ.

ಬಾಕಿಯಿಂದಾಗಿ ಈ ಯೋಜನೆಗಳ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಪೂರೈಸಲು ತೊಂದರೆ ಆಗುತ್ತಿತ್ತು. ಆದ್ದರಿಂದ ನಮ್ಮ ಸರ್ಕಾರವು ಬಾಕಿ ಮೊತ್ತವನ್ನು ಮನ್ನಾ ಮಾಡುವ ಮೂಲಕ ಬಡಕುಟುಂಬಗಳ ಮೇಲಿದ್ದ ಆರ್ಥಿಕ ಹೊರೆಯನ್ನು ಇಳಿಸಿದೆ ಎಂದು ಸಿಎಂ ತಿಳಿಸಿದ್ದಾರೆ.

ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ ಹಿಂದೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಯೋಜನೆ ಜಾರಿಯ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಈ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ