ಕಾವೇರಿ ಜಲಾನಯನ ವ್ಯಾಪ್ತಿಯಲ್ಲಿ ಸತತವಾಗಿ ಸುರಿದ ಧಾರಾಕಾರ ಮಳೆಗೆ ಕನ್ನಂಬಾಡಿ ಕಟ್ಟೆಯಲ್ಲಿ 103.22 ಅಡಿ ನೀರು ಸಂಗ್ರಹವಾಗಿದೆ.
ಕೃಷ್ಣರಾಜಸಾಗರ ಜಲಾಶಯಕ್ಕೆ 15,989 ಕ್ಯೂಸೆಕ್ಸ್ ಒಳಹರಿವು ಇದ್ದು, 1048 ಕ್ಯೂಸೆಕ್ಸ್ ಹೊರಹರಿವು ಇದೆ. ಶುಕ್ರವಾರ ಸಂಜೆ ವೇಳೆಗೆ 103.22 ಅಡಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ ಇದೇ ವೇಳೆಗೆ 86.55 ಅಡಿ ನೀರು ಸಂಗ್ರಹವಾಗಿತ್ತು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿದ ಭಾರಿ ಮಳೆಗೆ ನೀರಿನ ಪ್ರಮಾಣ ಹೆಚ್ಚಳವಾಗಿ, ಕನ್ನಂಬಾಡಿ ಅಣೆಕಟ್ಟೆ ಭರ್ತಿಯಾಗುತ್ತಿರುವುದು ಜನರಲ್ಲಿ ಸಂತಸ ಮೂಡಿಸಿದೆ.