Saturday, November 21, 2026

ಪ್ರಾಯೋಗಿಕ ಆವೃತ್ತಿ

ವಿಧಾನ ಪರಿಷತ್‌ಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳಿಂದ 11 ಜನ ಅವಿರೋಧ ಆಯ್ಕೆ

ವಿಧಾನ ಪರಿಷತ್‌ಗೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳಿಂದ ಒಟ್ಟು 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತು ಚುನಾವಣಾಧಿಕಾರಿಯಾಗಿರುವ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್‌ನಿಂದ ಎನ್‌.ಎಸ್‌ ಭೋಸರಾಜು, ಐವನ್ ಡಿಸೋಜ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಲ್ಕಿಸ್ ಭಾನು, ಬಿಜೆಯಿಂದ ಸಿ.ಟಿ ರವಿ, ಎನ್‌.ರವಿಕುಮಾರ್ ಮತ್ತು ಎಂ.ಜಿ ಮುಳೆ, ಜೆಡಿಎಸ್‌ನಿಂದ ಟಿ.ಎನ್‌.ಜವರಾಯಿಗೌಡ ಅವರು ಆಯ್ಕೆಯಾಗಿದ್ದಾರೆ.

ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿನ 11 ಸ್ಥಾನಗಳಿಗೆ ಜೂ.13ರಂದು ಚುನಾವಣೆ ನಡೆಯಬೇಕಿತ್ತು. 11 ಸ್ಥಾನಗಳಿಗೆ ಒಟ್ಟು 12 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಈ ಪೈಕಿ ಆಸಿಫ್ ಪಾಷಾ ಎಂಬುವರು ಸಲ್ಲಿಕೆ ಮಾಡಿದ್ದ ನಾಮಪತ್ರದಲ್ಲಿ ಸೂಚಕರಿಲ್ಲದ ಕಾರಣ ತಿರಸ್ಕೃತಗೊಂಡಿತ್ತು.

ಗುರುವಾರ (ಜೂ.6) ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಯಾರೊಬ್ಬರೂ ನಾಮಪತ್ರ ಹಿಂಪಡೆಯದೆ ಇದ್ದುದ್ದರಿಂದ ಕಣದಲ್ಲಿದ್ದ ಎಲ್ಲ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿ ಘೋಷಣೆ ಮಾಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ