Friday, May 17, 2024

ಪ್ರಾಯೋಗಿಕ ಆವೃತ್ತಿ

ಮಣಿಪುರ| ಮರುಕಳಿಸಿದ ಹಿಂಸಾಚಾರ; ಗುಂಪು ಘರ್ಷಣೆ- 15 ಮನೆಗಳಿಗೆ ಬೆಂಕಿ

ಮಣಿಪುರದ ಇಂಫಾಲ್ ಪಶ್ಚಿಮ ಭಾಗದಲ್ಲಿ ಮತ್ತೆ ಹಿಂಸಾಚಾರ ಆರಂಭವಾಗಿದೆ. ಶನಿವಾರ ತಡರಾತ್ರಿಯಿಂದ ಹಿಂಸಾಚಾರ ಮುಂದುವರೆದಿದ್ದು, 15 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ಸಂಜೆ ಲಾಂಗೋಲ್ ಗೇಮ್ ಗ್ರಾಮದಲ್ಲಿ ಎರಡು ಸಮುದಾಯಗಳ ನಡುವೆ ಗುಂಪು ಘರ್ಷಣೆ ನಡೆದಿದ್ದರಿಂದ ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದುಬಂದಿದೆ.

ಇಂಫಾಲ್ ಪಶ್ಚಿಮ ಜಿಲ್ಲೆಯ ಲಾಂಗೋಲ್ ಗೇಮ್ಸ್ ಗ್ರಾಮದಲ್ಲಿ ಶನಿವಾರ ಸಂಜೆ ಗುಂಪೊಂದು ದೌರ್ಜನ್ಯ ನಡೆಸಿದ್ದರಿಂದ 15 ಮನೆಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದುಷ್ಕರ್ಮಿಗಳನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸಲು ಭದ್ರತಾ ಪಡೆಗಳು ಹಲವಾರು ಸುತ್ತಿನ ಅಶ್ರುವಾಯು ಶೆಲ್‌ಗಳನ್ನು ಹಾರಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂಸಾಚಾರದ ವೇಳೆ 45 ವರ್ಷದ ವ್ಯಕ್ತಿಯೊಬ್ಬರಿಗೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಎಡತೊಡೆಯ ಮೇಲೆ ಗುಂಡಿನ ಗಾಯಗಳೊಂದಿಗೆ ಅವರನ್ನು ಇಂಫಾಲ್‌ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಲಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಗುಂಪನ್ನು ಚದುರಿಸಲು ಮತ್ತು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಭದ್ರತಾ ಸಿಬ್ಬಂದಿ ಹರಸಾಹಸ ಪಡುತ್ತಿದ್ವಾರ, ಭಾನುವಾರ ಬೆಳಿಗೆ ಪರಿಸ್ಥಿತಿ ಸುಧಾರಿಸಿದರೂ ನಿರ್ಬಂಧಗಳು ಮುಂದುವರೆದಿವೆ ಇಂಫಾಲ್ ಪೂರ್ವ ಜಿಲ್ಲೆಯ ಚೆಕನ್ ಪ್ರದೇಶದಲ್ಲೂ ಹಿಂಸಾಚಾರ ನಡೆದಿರುವುದು ವರದಿಯಾಗಿದೆ. ಅಲ್ಲಿ ಶನಿವಾರ ಸಂಜೆ ದೊಡ್ಡ ವಾಣಿಜ್ಯ ಸಂಸ್ಥೆಯ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿದೆ. ಅಕ್ಕಪಕ್ಕದ ಮೂರು ಮನೆಗಳಿಗೂ ಬೆಂಕಿ ಹಚ್ಚಲಾಗಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಶನಿವಾರ ಮುಂಜಾನೆ ಬಿಷ್ಣುಪುರ್ ಜಿಲ್ಲೆಯಲ್ಲಿ ಮೈತಿ ಸಮುದಾಯದ ಮೂವರನ್ನು ಕೊಲೆ ಮಾಡಲಾಯಿತು. ಕುಕಿ-ಜೋ ಸಮುದಾಯದ ಇಬ್ಬರು ಚುರಾಚಂದ್‌ಪುರದಲ್ಲಿ ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರ ವಿಧಾನಸಭಾ ಕ್ಷೇತ್ರಗಳ ಸಮನ್ವಯ ಸಮಿತಿ ಕರೆ ನೀಡಿದ ಬಂದ್ ನಡುವೆಯೂ ಈ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಇಂಪಾಲ್‌ನಲ್ಲಿ ಸಾಮಾನ್ಯ ಜನ ಜೀವನ ಸ್ಥಗಿತಗೊಂಡಿತ್ತು.

ಈ ಸಾವುಗಳೊಂದಿಗೆ, ಮೇ 3 ರಿಂದ ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಜನಾಂಗೀಯ ಘರ್ಷಣೆಗಳಿಂದಾಗಿ 187 ಕ್ಕೆ ಏರಿದೆ. ಕೇಂದ್ರ ಭದ್ರತಾ ಪಡೆಗಳ ಭಾರೀ ಉಪಸ್ಥಿತಿಯ ಹೊರತಾಗಿಯೂ ಮುಂದುವರಿದ ಅಶಾಂತಿಯು 60,000 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಿದೆ.

ಆಡಳಿತಾರೂಢ ಬಿಜೆಪಿ ಶಾಸಕ ರಾಜ್‌ಕುಮಾರ್ ಇಮೋ ಸಿಂಗ್ ಅವರು, ನಾಗರಿಕರನ್ನು ರಕ್ಷಿಸುವುದು ಭದ್ರತಾ ಪಡೆಗಳ ಕರ್ತವ್ಯ ಎಂದು ಶನಿವಾರ ಟೀಕಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!