Thursday, September 19, 2024

ಪ್ರಾಯೋಗಿಕ ಆವೃತ್ತಿ

ಅತ್ಯಾಚಾರ : ಅಪರಾಧಿಗೆ 20 ವರ್ಷ ಕಠಿಣ ಶಿಕ್ಷೆ

ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿದ ಅಪರಾಧಿಗೆ ಮಂಡ್ಯನಗರದ ಅಧಿಕ, ಸತ್ರ ಮತ್ತು ತ್ವರಿತಗತಿ ನ್ಯಾಯಾಲಯ 20 ವರ್ಷ ಕಠಿಣ ಸಜೆ ಹಾಗೂ 35 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಆರ್.ಅಜಯ್ ಎಂಬಾತ ಶಿಕ್ಷೆಗೆ ಗುರಿಯಾದ ವ್ಯಕ್ತಿ. 2019ರಲ್ಲಿ ಅರಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೂವರು ಬಾಲಕಿಯರನ್ನು ಚಾಕೋಲೇಟ್ ಕೊಡಿಸುವುದಾಗಿ ಪುಸಲಾಯಿಸಿ, ಅವರನ್ನು ಅಕ್ರಮವಾಗಿ ಬಂಧನದಲ್ಲಿಟ್ಟು ಅಶ್ಲೀಲ ಚಿತ್ರಗಳನ್ನು ತೋರಿಸಿ ಅವರ ಮೇಲೆ ಅತ್ಯಾಚಾರ ನಡೆಸಿದ್ದ.

ಅತ್ಯಾಚಾರದ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ.

ಈ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆ ನಡೆಸಿದ ಅಧಿಕ ಸತ್ರ ತ್ವರಿತಗತಿ ನ್ಯಾಯಾಲಯದ ನ್ಯಾಯಾಧೀಶರಾದ ನಾಗಜ್ಯೋತಿ ಅವರು ಈ ತೀರ್ಪು ಪ್ರಕಟಿಸಿದ್ದಾರೆ.

ಸರ್ಕಾರಿ ಅಭಿಯೋಜಕರಾದ ಪಿ.ಕೆ.ಶಕೀಲ ಅಬೂಬಕರ್ ಸಂತ್ರಸ್ತಯರ ಪರ ವಾದ ಮಂಡಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!