Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಅಪರಾಧಿಗೆ 20 ವರ್ಷ ಜೈಲು

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಶಿಕ್ಷೆ ವಿಧಿಸಿ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯ ತೀರ್ಪು ನೀಡಿದೆ.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ಬಿದರಕರೆ ಗ್ರಾಮದ ರವಿ (35) ಶಿಕ್ಷೆಗೆ ಒಳಗಾದ ಅಪರಾಧಿ.

ಘಟನೆಯ ವಿವರ

ಅಪರಾಧಿ ರವಿಯು ಕಳೆದ 2019 ಸಾಲಿನಲ್ಲಿ ಬಿದರಕೆರೆ ಗ್ರಾಮದ ಐದು ವರ್ಷದ ಅಪ್ರಾಪ್ತ ಬಾಲಕಿಯನ್ನು ನಮ್ಮ ಹೊಲದ ಕಡೆ ತಿರುಗಾಡಿಕೊಂಡು ಬರೋಣವೆಂದು ಸ್ಕೂಟರ್‌ನಲ್ಲಿ ಲಾಳನಕೆರೆ ಕಡೆಗೆ ಕರೆದುಕೊಂಡು ಯಾವುದೋ ಕಲ್ಲು ಬಂಡೆಯ ಬಳಿಯ ಜಮೀನಿನ ಹತ್ತಿರ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿ, ಯಾರಿಗಾದರೂ ಹೇಳಿದರೆ ಹೊಡೆಯುತ್ತೇನೆಂದು ಬೆದರಿಕೆ ಹಾಕಿದ್ದ.

ಜಾಹೀರಾತು

ಈ ಕುರಿತು ಬಿಂಡಿಗನವಿಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ಅಂದಿನ ವೃತ ನಿರೀಕ್ಷಕ ನಂಜಪ್ಪ ಆರೋಪಿ ವಿರುದ್ಧ ದೋಷರೋಪಣಾ ಪತ್ರ ಸಲ್ಲಿಸಿದರು. ಈ ಕುರಿತು ವಿಚಾರಣೆ ನಡೆಸಿದ ಮಂಡ್ಯ ಅಧಿಕ ಸತ್ರ ಮತ್ತು ತ್ವರಿತಗತಿ 2ನೇ ನ್ಯಾಯಾಲಯದ ವಿಶೇಷ ನ್ಯಾಯಾಧೀಶೆ ಕೆ.ಎ ನಾಗಜ್ಯೋತಿ ಅವರು ಅಪರಾಧಿಗೆ ಐಪಿಸಿ ಅಡಿ ಅಪರಾಧಕ್ಕೆ 20 ವರ್ಷ ಸಜೆ ಮತ್ತು 50 ಸಾವಿರ ದಂಡ ವಿಧಿಸಿದ್ದಾರೆ.

ದಂಡ ಪಾವತಿಸಲು ತಪ್ಪಿದಲ್ಲಿ  5 ವರ್ಷಗಳ ಸಾದಾ ಶಿಕ್ಷೆ ಹಾಗೂ ಐಪಿಸಿ ಕಲಂ 366 ಅಡಿಯಲ್ಲಿನ ಅಪರಾಧಕ್ಕೆ 2 ವರ್ಷಗಳ ಶಿಕ್ಷೆ ಮತ್ತು 25 ಸಾವಿರ ರೂ.ಗಳ ದಂಡ ತಪ್ಪಿದಲ್ಲಿ 6 ತಿಂಗಳು ಸಾದಾ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಸರ್ಕಾರದ ಪರ ವಿಶೇಷ ಸರ್ಕಾರಿ ಅಭಿಯೋಜಕ ಹೆಬ್ಬಕವಾಡಿ ನಾಗರಾಜು ವಾದ ಮಂಡಿಸಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ