ಕಳೆದ ಇಪ್ಪತ್ತು ವರ್ಷಗಳ ಕಾಲ ಮದ್ದೂರು ತಾಲ್ಲೂಕಿನ ಮಲ್ಲನಕುಪ್ಪೆ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಸಿಕ್ಕಿರಲಿಲ್ಲ.
ಈ ಬಾರಿ ಎಲ್ಲಾ ಸದಸ್ಯರ ಸಹಕಾರದಿಂದ ಅಧಿಕಾರ ಸಿಕ್ಕಿದೆ ಎಂದು ನೂತನ ಅಧ್ಯಕ್ಷ ರಮೇಶ್ ಹೇಳಿದರು. ಮಲ್ಲನಕುಪ್ಪೆ ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಆಯ್ಕೆಯಾದ ರಮೇಶ್ ಅವರನ್ನು ಇಂದು ಕೆಪಿಸಿಸಿ ಸದಸ್ಯ ಎಸ್. ಗುರುಚರಣ್ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಕಾಂಗ್ರೆಸ್ ಬೆಂಬಲಿತ ನೂತನ ಅಧ್ಯಕ್ಷ ರಮೇಶ್, ಕಳೆದ ಇಪ್ಪತ್ತು ವರ್ಷಗಳಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿಲ್ಲ. ಈ ಬಾರಿ ಎಲ್ಲಾ ಸದಸ್ಯರ ಸಹಕಾರದಿಂದ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದೇನೆ. ಕಾಂಗ್ರೆಸ್ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಪಕ್ಷ ಬಲಪಡಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಟಿಎಪಿಸಿಎಂಎಸ್ ನಿರ್ದೇಶಕ ಶಂಕರ ಲಿಂಗಯ್ಯ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ನಾಗೇಗೌಡ. ಕಾಂಗ್ರೆಸ್ ಮುಖಂಡ ಕೆ.ಟಿ. ರಾಜಣ್ಣ, ಬಿಳಿಯಪ್ಪ. ಸಿದ್ದು. ಪ್ರಶಾಂತ್. ರವಿ ವಾಸುದೇವ್,ಸುರೇಶ್, ಮಹೇಶ್,ಪ್ರಮೋದ ಹಾಜರಿದ್ದರು.