Saturday, May 18, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದ ಪ್ರತಿ ಗೃಹಿಣಿಯರಿಗೆ ತಿಂಗಳಿಗೆ ₹ 2000 : ‘ಗೃಹಲಕ್ಷ್ಮಿ’ ಯೋಜನೆ ಘೋಷಿಸಿದ ಕಾಂಗ್ರೆಸ್

ಕರ್ನಾಟಕ ರಾಜ್ಯದ ಪ್ರತಿ ಕುಟುಂಬದ ಗೃಹಿಣಿಗೆ ತಿಂಗಳಿಗೆ 2 ಸಾವಿರ ರೂ. ಸಹಾಯಧನ ನೀಡುವ ‘ಗೃಹಲಕ್ಷ್ಮಿ’ಯೋಜನೆಯನ್ನು ಕರ್ನಾಟಕ ಕಾಂಗ್ರೆಸ್ ಘೋಷಣೆ ಮಾಡಿದೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕಗಾಂಧಿ ಅವರ ನೇತೃತ್ವದಲ್ಲಿ ನಡೆದ ‘ನಾ ನಾಯಕಿ’ ಮಹಿಳಾ ಸಮಾವೇಶದಲ್ಲಿ ಈ ಜನಪರವಾದ ಕಾಂಗ್ರೆಸ್ ಗ್ಯಾರಂಟಿ ನಂ.2 ಯೋಜನೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದರು.

ರಾಜ್ಯದಲ್ಲಿ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಮಹಿಳೆಯರಿಗೆ ನೆರವಾಗುವ ಉದ್ಧೇಶದಿಂದ ಈ ಯೋಜನೆಯನ್ನು ಪ್ರಿಯಾಂಕಗಾಂಧಿ ಅವರ ಸಮ್ಮುಖದಲ್ಲೇ ಘೋಷಣೆ ಮಾಡುತ್ತಿದ್ದೇವೆ, ಎಂದು ಇದರ ಕಾಂಗ್ರೆಸ್ ಗ್ಯಾರಂಟಿ ಚೆಕ್ಕಿಗೆ ಸಹಿ ಮಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಕಾಂಗ್ರೆಸ್ ಗ್ಯಾಂರಟಿಯ ಮೊದಲ ಚೆಕ್ ಅನ್ನು ಪ್ರಿಯಾಂಕಗಾಂಧಿ ಅವರಿಗೆ ಹಸ್ತಾಂತರ ಮಾಡಿದರು.

“>

ಕಾಂಗ್ರೆಸ್ ಗ್ಯಾರಂಟಿ ನಂ.02 ‘ಗೃಹಲಕ್ಷ್ಮಿ’ ಯೋಜನೆ ರಾಜ್ಯದ ಎಲ್ಲಾ ಗೃಹಿಣಿಯರಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ!. ಬೆಲೆಯೇರಿಕೆಯಿಂದ ಬಸವಳಿದು ಮನೆಯ ನಿರ್ವಹಣೆ ಮಾಡಲು ಹರಸಾಹಸ ಪಡುತ್ತಿರುವ ರಾಜ್ಯದ ಎಲ್ಲಾ ಗೃಹಿಣಿಯರೇ, ನಿಮ್ಮ ಮನೆ ನಿರ್ವಹಣೆ ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ಕಾಂಗ್ರೆಸ್ ಟ್ವೀಟ್ ನಲ್ಲಿ ತನ್ನ ಯೋಜನೆ ಬಗ್ಗೆ ಬರೆದುಕೊಂಡಿದೆ.

ಕಾಂಗ್ರೆಸ್ ಗ್ಯಾರಂಟಿ ನಂ.02 ಪ್ರತಿ ಕುಟುಂಬದ ಓರ್ವ ಗೃಹಿಣಿಗೆ ಪ್ರತಿ ತಿಂಗಳಿಗೆ 2000 ರೂಪಾಯಿ ಸಹಾಯಧನ ನೇರವಾಗಿ ನೀಡುವ ‘ಗೃಹಲಕ್ಷ್ಮಿ’ ಯೋಜನೆ. ರಾಜ್ಯದ ಮಹಿಳೆಯರೇ, ದಿನಸಿ ವಸ್ತುಗಳು ದುಬಾರಿಯಾಗಿವೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಪ್ರತಿ ತಿಂಗಳ ದಿನಸಿ ಖರ್ಚು ಇನ್ಮುಂದೆ ಕಾಂಗ್ರೆಸ್ ಹೊಣೆ!. ಮಹಿಳೆಯರ ಸಮಸ್ಯೆಗಳನ್ನು ಮನಗಂಡಿರುವ ಕಾಂಗ್ರೆಸ್ ಪಕ್ಷವು ಜೀವನ ನಿರ್ವಹಣೆಯಲ್ಲಿ ಮಹಿಳೆಯರ ಪರ ನಿಲ್ಲಲು ಪ್ರತಿ ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ನೇರವಾಗಿ 2000 ರೂಪಾಯಿ ಹಣ ಸಹಾಯಧನ ನೀಡುವ ‘ಗೃಹಲಕ್ಷ್ಮಿ’ ಯೋಜನೆಯನ್ನು ಜಾರಿಗೆ ತರುವ ಭರವಸೆ ನೀಡುತ್ತಿದೆ. ಇದು ಕಾಂಗ್ರೆಸ್ ಗ್ಯಾರಂಟಿ ನಂ.02. ರಾಜ್ಯದ ಮಹಿಳೆಯರೇ, ನಿಮ್ಮ ಮನೆಯ ಗ್ಯಾಸ್ ಸಿಲಿಂಡರ್ ಖಾಲಿಯಾಗಿದೆ ಎಂಬ ಚಿಂತೆ ಬಿಡಿ. ನಿಮ್ಮ ಮನೆಯ ಸಿಲಿಂಡರ್ ತುಂಬಿಸುವುದು ಇನ್ಮುಂದೆ ಕಾಂಗ್ರೆಸ್ ಹೊಣೆ ಎಂದು ಕಾಂಗ್ರೆಸ್ ಪಕ್ಷವು ರಾಜ್ಯದ ಮಹಿಳೆಯರಿಗೆ ಭರವಸೆ ನೀಡಿದೆ.

ಕಾಂಗ್ರೆಸ್ ಪಕ್ಷವು ಇತ್ತೀಚೆಗಷ್ಟೆ ರಾಜ್ಯದ ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ನೀಡುವ ಕಾಂಗ್ರೆಸ್ ಗ್ಯಾರಂಟಿ ನಂ.1 ”ಗೃಹಜ್ಯೋತಿ” ಯೋಜನೆಯನ್ನು ಪ್ರಕಟ ಮಾಡಿ ಮತದಾರರ ಗಮನ ಸೆಳೆದಿತ್ತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!