Sunday, May 19, 2024

ಪ್ರಾಯೋಗಿಕ ಆವೃತ್ತಿ

2023ರ ಚುನಾವಣೆಗೆ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಇಲ್ಲ : ಹೆಚ್.ಡಿ.ಕುಮಾರಸ್ವಾಮಿ


  • ನವೆಂಬರ್ 1 ರಂದು ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

  • ನವೆಂಬರ್ 1   ಪಂಚರತ್ನ ರಥಯಾತ್ರೆ ಆರಂಭ
  • ಜೆಡಿಎಸ್ ಸ್ವತಂತ್ರವಾಗಿ ರಾಜ್ಯದಲ್ಲಿ ಸರ್ಕಾರ ರಚಿಸುವ ಬಗ್ಗೆ ವಿಶ್ವಾಸ

ಕರ್ನಾಟಕದಲ್ಲಿ 2023 ರ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಚುನಾವಣಾ ಮೈತ್ರಿ ಮಾಡಿಕೊಳ್ಳುವುದಿಲ್ಲ ಮತ್ತು 123-126 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುವುದಾಗಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.

ಮುಂದಿನ ವರ್ಷ ಏಪ್ರಿಲ್ ವೇಳೆಗೆ ಚುನಾವಣೆ ನಡೆಯಲಿರುವ ಒಟ್ಟು 224 ವಿಧಾನಸಭಾ ಸ್ಥಾನಗಳಲ್ಲಿ ಕನಿಷ್ಠ 123 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆಡಿಎಸ್ ಸ್ವತಂತ್ರವಾಗಿ ರಾಜ್ಯದಲ್ಲಿ ಸರ್ಕಾರ ರಚಿಸುವ ಬಗ್ಗೆ ಮಾಜಿ ಮುಖ್ಯಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.

ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ತಾನು ಹಮ್ಮಿಕೊಂಡಿರುವ ಕಲ್ಯಾಣ ಕಾರ್ಯಕ್ರಮಗಳ ಕುರಿತು ಜಾಗೃತಿ ಮೂಡಿಸಲು ಕುಮಾರಸ್ವಾಮಿ ನೇತೃತ್ವದಲ್ಲಿ ನವೆಂಬರ್ 1 ರಂದು ಕೋಲಾರ ಜಿಲ್ಲೆಯ ಮುಳಬಾಗಲಿನಿಂದ ‘ಪಂಚರತ್ನ ರಥಯಾತ್ರೆ’ ಆರಂಭಿಸಲಿದೆ.

ಜೆಡಿಎಸ್ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದರು.

ಜೆಡಿಎಸ್‌ಗೆ ಬಹುಮತದ ಕೊರತೆಯಾದರೆ ಏನು ಮಾಡಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಸ್ವತಂತ್ರರು ಇರುತ್ತಾರೆ… ನನ್ನ ಅಭಿಪ್ರಾಯದಲ್ಲಿ ಜೆಡಿಎಸ್‌ಗೆ ಉತ್ತಮ ವಾತಾವರಣವಿದೆ, ಚುನಾವಣೆಗೆ ಇನ್ನೂ ಆರು ತಿಂಗಳಿದೆ, ಮತ್ತು ನಾವು ಕನಿಷ್ಠ 123 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಸಾಧಿಸಲು ಜನರ ವಿಶ್ವಾಸವನ್ನು ಗಳಿಸಲು ಪ್ರಯತ್ನಿಸುತ್ತೇವೆ.

ಎಲ್ಲಾ 224 ವಿಧಾನಸಭಾ ಸ್ಥಾನಗಳಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದ ಅವರು, “ರಾಜ್ಯದ ಯಾವುದೇ ಪ್ರಾದೇಶಿಕ ಪಕ್ಷಗಳು ಅಥವಾ ಸಂಘಟನೆಗಳು ನಮ್ಮೊಂದಿಗೆ ಚರ್ಚಿಸಿದ ನಂತರ ನಾಲ್ಕರಿಂದ ಐದು ಸ್ಥಾನಗಳಲ್ಲಿ ಸ್ಪರ್ಧಿಸಲು ಬಯಸಿದರೆ, ಅವರೊಂದಿಗೆ ಮೈತ್ರಿ ಹೊಂದಬೇಕೆ, ಬೇಡವೆ ಎಂಬುದನ್ನು ನಾವು ಪರಿಗಣಿಸುತ್ತೇವೆ ಎಂದು ತಿಳಿಸಿದರು.

ಹೆಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದೆ ಎರಡೂ ರಾಷ್ಟ್ರೀಯ ಪಕ್ಷಗಳೊಂದಿಗೆ ಸಮ್ಮಿಶ್ರ ಸರ್ಕಾರದ ನೇತೃತ್ವ ವಹಿಸಿದ್ದರು, ಫೆಬ್ರವರಿ 2006 ರಿಂದ 20 ತಿಂಗಳ ಕಾಲ ಬಿಜೆಪಿಯೊಂದಿಗೆ ಮತ್ತು 2018 ರ ವಿಧಾನಸಭಾ ಚುನಾವಣೆಯ ನಂತರ 14 ತಿಂಗಳ ಕಾಲ ಕಾಂಗ್ರೆಸ್ ಜೊತೆಗಿನ ಸರ್ಕಾರವನ್ನು ನಡೆಸಿದ್ದರು.

ಚುನಾವಣಾ ಪೂರ್ವದಲ್ಲಿ ಮೊದಲ ಹೆಜ್ಜೆಯಾಗಿ ಜೆಡಿಎಸ್ ಪಕ್ಷವು ಈಗಾಗಲೇ 126 ಅಭ್ಯರ್ಥಿಗಳನ್ನು ಗುರುತಿಸಿದೆ ಎಂದು ತಿಳಿಸಿದ ಹೆಚ್‌.ಡಿ ಕುಮಾರಸ್ವಾಮಿ, ನವೆಂಬರ್ 1 ರಂದು ಪಂಚರತ್ನ ರಥಯಾತ್ರೆಯನ್ನು ಪ್ರಾರಂಭಿಸಿದಾಗ 123-126 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸುತ್ತೇವೆ.

ಜೆಡಿಎಸ್ ಯಾರ ಮನೆ ಬಾಗಿಲನ್ನೂ ತಟ್ಟಿಲ್ಲ, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷವನ್ನು ಸಂಘಟಿಸುತ್ತಿದ್ದಾರೆ. “ಬಿಜೆಪಿ ಮತ್ತು ಕಾಂಗ್ರೆಸ್ ಇನ್ನೂ ನಮ್ಮ ಕೆಲವು ನಾಯಕರನ್ನು ಸೆಳೆಯಲು ಏಕೆ ಪ್ರಯತ್ನಿಸುತ್ತಿವೆ? ನಾವು ಅವರ ಬಾಗಿಲು ಬಡಿಯುವುದೇ? ಎಂದು ಕಿಡಿಕಾರಿದರು.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 2 ದಿನಗಳ ಸಂಘಟನಾ ಸಮಾಲೋಚನೆ ಮತ್ತು ಪಂಚರತ್ನ ರಥಯಾತ್ರೆ ಕಾರ್ಯಗಾರವನ್ನು ಉದ್ಘಾಟಿಸಲಾಯಿತು.

ರಾಜ್ಯದಲ್ಲಿ ಜೆಡಿಎಸ್ ಪಕ್ಷವನ್ನು ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ತರುವ ಗುರಿಯೊಂದಿಗೆ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ರು.

ಕಾರ್ಯಗಾರದಲ್ಲಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು, ಸಂಭಾವ್ಯ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಎಲ್ಲಾ ಜಿಲ್ಲೆಗಳ ಅಧ್ಯಕ್ಷರು ಭಾಗಿಯಾಗಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!