Sunday, November 22, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | 29 ಗ್ರಾಮಾಡಳಿತ ಅಧಿಕಾರಿಗಳಿಗೆ ದಂಡನೆ ; ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರ ರೆಡ್ಡಿ ಅವರು ಗೂಗಲ್ ಮೀಟಿಂಗ್‌ಗೆ ಬರಲಿಲ್ಲ ಎಂಬ ಕಾರಣಕ್ಕೆ 29 ಗ್ರಾಮಾಡಳಿತ ಅಧಿಕಾರಿಗಳನ್ನು ಯಾವುದೇ ತಿಳುವಳಿಕೆ ನೀಡದೆ ವಿಚಾರಣೆಯನ್ನೂ ನಡೆಸದೆ ಏಕಾಯಕಿ ದಂಡನೆ ವಿಧಿಸಿದ್ದಾರೆಂದು ಮಂಡ್ಯದ ಗ್ರಾಮಾಡಳಿತಾಧಿಕಾರಿಗಳು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.

ಒಂದು ವಾರ್ಷಿಕ ವೇತನ ಬಡ್ತಿಯನ್ನು ಕಡಿತಗೊಳಿಸಿ ದಂಡನೆ ವಿಧಿಸಿ ಆದೇಶಿಸಲಾಗಿದೆ. ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ನಡೆಸುತ್ತಿರುವ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್, ಎಡಿಸಿ ಕನಕರೆಡ್ಡಿ ಅವರ ದುರಾಡಳಿತ ಮತ್ತು ದರ್ಪದ ಕಾರಣಗಳಿಂದಾಗಿ ಸರ್ಕಾರ ಕೂಡಲೇ ಇವರನ್ನು ವರ್ಗಾವಣೆ ಮಾಡಿ ವಿಎ ಗಳಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಲ್ಲಿ ಮನವಿ ಮಾಡಿದ್ದಾರೆ.

ಮಂಡ್ಯ ತಾಲ್ಲೂಕು ಕಚೇರಿಯ ಗ್ರಾಮಾಡಳಿತ ಅಧಿಕಾರಿಗಳು ತೋಳಿಗೆ ಕಪ್ಪು ಪಟ್ಟಿ ಧರಿಸಿ ಕಾರ್ಯನಿರ್ವಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕುಮಾರ್, ಸಂದೀಪ್, ಶಾರದ, ಕಾವ್ಯರಾಣಿ, ಕವನ ಮತ್ತಿತರರು ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ