Friday, September 20, 2024

ಪ್ರಾಯೋಗಿಕ ಆವೃತ್ತಿ

ವಿಶ್ವದ 2ನೇ ಶ್ರೀಮಂತನಾಗಿ ಅದಾನಿ ಮಾಡಿದ್ದೇ ಮೋದಿ ಸಾಧನೆ

ಉದ್ಯಮಿ ಅದಾನಿಯನ್ನು ವಿಶ್ವಕ್ಕೆ ಎರಡನೇ ಶ್ರೀಮಂತ ವ್ಯಕ್ತಿಯಾಗಿ ಮಾಡಿದ್ದೇ ಪ್ರಧಾನಿ ನರೇಂದ್ರ ಮೋದಿಯವರ ಎಂಟು ವರ್ಷಗಳ ಸಾಧನೆ ಎಂದು ರಾಜ್ಯ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಹಮ್ಮದ್ ನಲ್ಪಾಡ್ ಟೀಕಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ಅಚ್ಚೇದಿನ್ ಎಂಬುವುದು ಉದ್ಯಮಿಗಳಾದ ಅಂಬಾನಿ ಮತ್ತು ಅದಾನಿ ಅವರಿಗೆ ಮಾತ್ರ ಸೀಮಿತವಾಗಿದೆ. ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣ ಮಾಡುವುದರ ಮೂಲಕ ದೇಶದ ಯುವ ಜನರನ್ನು ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ದೇಶದ ಯುವಜನತೆ ಮುಂದಾಗಬೇಕು ಎಂದರು.

ದೇಶದಲ್ಲಿನ ಯುವಜನತೆ ಉದ್ಯೋಗವಿಲ್ಲದೆ ಅಲೆಯುತ್ತಿದ್ದಾರೆ.ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವುದಾಗಿ ಹೇಳಿದ ಮೋದಿಯವರು ನುಡಿದಂತೆ ಉದ್ಯೋಗ ಸೃಷ್ಟಿ ಮಾಡಿಲ್ಲ.

ನಿರುದ್ಯೋಗ ಸಮಸ್ಯೆಯನ್ನು ಬಗೆಹರಿಸಲು ವಿಫಲವಾಗಿರುವ ಬಿಜೆಪಿ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರನ್ನು ಸಂಕಷ್ಟಕ್ಕೆ ದೂಡಿದೆ ಎಂದರು.

ನಿರುದ್ಯೋಗ ಸಮಸ್ಯೆ ನಿವಾರಿಸಿ ದೇಶವನ್ನು ಉಳಿಸಲು ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು. ಈಗಾಗಲೇ ಬಿಜೆಪಿ ಜನವಿರೋಧಿ ನೀತಿಗಳಿದ ಬೇಸತ್ತಿರುವ ರೈತರು,ಜನಸಾಮಾನ್ಯರು ಕಾಂಗ್ರೆಸ್ ಕಡೆಗೆ ಒಲವು ಹೊಂದಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರ ತಂದರೇ ಮಾತ್ರ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದರು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆಯೂ ರಾಜ್ಯದಲ್ಲಿ 23 ದಿನ ಸಾಗಲಿದೆ. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ನಿರುದ್ಯೋಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ ಸೇರಿದಂತೆ 7 ಜಿಲ್ಲೆಗಳಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಯೂತ್ ಕಾಂಗ್ರೆಸ್ ವತಿಯಿಂದ 8 ಜಿಲ್ಲೆಗಳಲ್ಲೂ ಸಭೆ ನಡೆಸಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮಾಡಲಾಗುತ್ತಿದೆ ಎಂದರು.

ಮುಖಂಡರಾದ ಪ್ರಭುಸ್ವಾಮಿ, ಶಿವರಾಜ್ ನಾಯಕ್, ಸತೀಶ್, ಗೋವರ್ಧನ್, ಸಂತೋಷ್, ಮಹೇಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!