Friday, November 20, 2026

ಪ್ರಾಯೋಗಿಕ ಆವೃತ್ತಿ

ಸಾಹಿತ್ಯ ಸಮ್ಮೇಳನ | ಮಂಡ್ಯ ಜಿಲ್ಲೆಯ ಶಾಲಾ – ಕಾಲೇಜುಗಳಿಗೆ 3 ದಿನ ರಜೆ ಘೋಷಣೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ 2 ದಿನಗಳ ಕಾಲ ರಜೆ ಘೋಷಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು (ಪ್ರೌಢಶಿಕ್ಷಣ) ಆದೇಶ ಹೊರಡಿಸಿದ್ದಾರೆ.

ಮಂಡ್ಯ ನಗರದಲ್ಲಿ ಸಾಹಿತ್ಯ ಸಮ್ಮೇಳನ ನಡೆಯುವ ಡಿ.20,21 ರಂದು ಸರ್ಕಾರ ರಜೆ ಘೋಷಣೆ ಮಾಡಿದ್ದು, ಡಿ.22ರಂದು ಭಾನುವಾರ ಆಗಿರುವುದರಿಂದ ಎಂದಿನಂತೆ ರಜೆ ಇರಲಿದೆ, ಇದರಿಂದಾಗಿ ನಿರಂತರವಾಗಿ ಮೂರು ದಿನಗಳ ಕಾಲ ವಿದ್ಯಾರ್ಥಿಗಳಿಗೆ ರಜೆ ದೊರೆಯಲಿದೆ.

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜರುಗಲಿದ್ದು, ಈ ಸಮ್ಮೇಳನಕ್ಕೆ ಆಗಮಿಸಲಿರುವ ಸಾಹಿತ್ಯಾಸಕ್ತರು ಹಾಗೂ ನೋಂದಣಿ ಮಾಡಿಕೊಂಡ ಪ್ರತಿನಿಧಿಗಳಿಗೆ ಮಂಡ್ಯ ಜಿಲ್ಲೆಯಲ್ಲಿರುವ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲು ಉದ್ದೇಶಿಸಲಾಗಿದ್ದು ಈ ಶಾಲೆಗಳಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕಾಗಿರುವ ಹಿನ್ನೆಲೆಯಲ್ಲಿ ರಜೆಯನ್ನು ಘೋಷಿಸಲಾಗಿದೆ.

ಈ ಕಾರ್ಯಕ್ರಮದ ರಜೆ ಅವಧಿಯನ್ನು ಮುಂದಿನ ಸರ್ಕಾರಿ ರಜಾ ದಿನಗಳಂದು ಪಾಠ, ಪ್ರವಚನ ನಡೆಸಲು ಆದೇಶ ನೀಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ