ಸಂಯುಕ್ತ ಹೋರಾಟ – ಕರ್ನಾಟಕ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ (ಜೆಸಿಟಿಯು) ವತಿಯಿಂದ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಿ, ಪರ್ಯಾಯ ನೀತಿಗಳಿಗಾಗಿ ಆಗ್ರಹಿಸಿ 72 ಗಂಟೆಗಳು ಮಹಾಧರಣಿಯನ್ನು ನ.26ರಿಂದ 28ರವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದು, ನ.28ರಂದು ಸಾವಿರಾರು ಜನರಿಂದ ಬೆಂಗಳೂರು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (AIAWU)ದ ರಾಜ್ಯಾಧ್ಯಕ್ಷ ಎಂ.ಪುಟ್ಟಮಾದು ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014 ರಿಂದಲೂ ದೇಶದಲ್ಲಿ ಅಧಿಕಾರದಲ್ಲಿರುವ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಕ್ರಮಣಕಾರಿಯಾಗಿ ರೂಪಿಸುತ್ತಿರುವ ಕಾರ್ಪೋರೇಟ್ ಬಂಡವಾಳಶಾಹಿಗಳ ಪರ ನವ ಉದಾರವಾದಿ ನೀತಿಗಳು ದೇಶದ ದುಡಿಯುವ ಜನರನ್ನು ಸಂಕಷ್ಟಕ್ಕೆ ದೂಡಿದೆ. ಕಾರ್ಪೊರೇಟ್ ತೆರಿಗೆಗಳನ್ನು ಕಡಿತ ಮಾಡುತ್ತಿರುವ ಕೇಂದ್ರ ಸರ್ಕಾರ, ಸಾಮಾನ್ಯ ಜನತೆಯ ಮೇಲೆ ಜಿ.ಎಸ್.ಟಿ. ಹೊರ ವಿಧಿಸಿದೆ, ಪೆಟ್ರೋಲಿಯಂ ಉತ್ಪನ್ನಗಳು ಸೇರಿದಂತೆ ಬಹುತೇಕ ಸಾರ್ವಜನಿಕ ಸೇವೆಗಳ ಬಳಕೆಗೆ ಹೆಚ್ಚಿನ ತೆರಿಗೆ ವಿಧಿಸುತ್ತಿರುವುದರಿಂದ ಎಲ್ಲ ಅಗತ್ಯ ಸರಕುಗಳ ಬೆಲೆಗಳು ತೀವ್ರವಾಗಿ ಏರಿಕೆಯಾಗುತ್ತಿದ್ದು, ಜನತೆ ತತ್ತರಿಸುವಂತಾಗಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ರಾಷ್ಟ್ರೀಯ ನಗದೀಕರಣ ಪೈಪ್ಲೈನ್ ಯೋಜನೆ ಮೂಲಕ ದೇಶದ ಸಂಪತ್ತಾದ ವಿದ್ಯುತ್, ರೈಲ್ವೆ, ಕಲ್ಲಿದ್ದಲು, ದೂರ ಸಂಪರ್ಕ, ವಿಮಾ ಕ್ಷೇತ್ರ, ವಿಮಾನಯಾನ, ರಕ್ಷಣಾ ಸಾಮಾಗಿ ಉತ್ಪಾದನಾ ಕೈಗಾರಿಕೆ’ ಸೇರಿದಂತೆ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗಿಯವರಿಗೆ ಮಾರಾಟ ಮಾಡಲಾಗುತ್ತಿದೆ. ಜನರಿಗೆ ಸೇವೆ ಒದಗಿಸಬೇಕಾದ ಅಗತ್ಯ ವಲಯಗಳಾದ ಆರೋಗ್ಯ, ಶಿಕ್ಷಣ, ಸಾರಿಗೆ, ಆಹಾರ, ನೀರು, ಭೂಮಿ, ಗಣಿ, ಆರಣ್ಯ ಸೇರಿದಂತೆ ಎಲ್ಲವನ್ನೂ ಕಾರ್ಪೊರೇಟ್ ವಲಯಕ್ಕೆ ಹಸ್ತಾಂತರಿಸಿ ಸೇವೆಯನ್ನು ಸರಕಾಗಿಸಲು ಹೊರಟಿದೆ ಎಂದು ಕಿಡಿಕಾರಿದರು.
ಹಲವು ಸ್ತ್ರೀಂ ಯೋಜನೆಗಳನ್ನು ದುರ್ಬಲಗೊಳಿಸುತ್ತಿದೆ. ಸರ್ಕಾರದ ಇಂತಹ ಜನ ವಿರೋಧಿ ಕ್ರಮಗಳು ಕಾರ್ಪೊರೇಟ್ ವರ್ಗದ ಸಂಪತ್ತು ಮತ್ತು ಆದಾಯವನ್ನು ಗಣನೀಯವಾಗಿ ಹೆಚ್ಚಿಸಿದ್ದರೆ, ಶೋಷಿತ ಜನ ಸಮೂಹದ ಜೀವನ ಮಟ್ಟವನ್ನು ದಾರಿದ್ರಕ್ಕೆ ತಳ್ಳಲ್ಪಟ್ಟಿದೆ. ರಾಷ್ಟ್ರೀಯ ಆದಾಯದಲ್ಲಿ ಭಾರತದ ಅತ್ಯಂತ ಮೇಲ್ವರದ ಶೇ.1 ರಷ್ಟು ಜನ ಶೇ.40.5 ರಷ್ಟು ಒಡೆತನ ಹೊಂದಿದ್ದರೆ, ಶೇ.50 ರಷ್ಟು ಸಾಮಾನ್ಯ ಜನರ ಒಡೆತನ ಶೇ.3ಕ್ಕೆ ಕುಸಿದಿದೆ, ನಿರುದ್ಯೋಗ, ಬಡತನ, ಹಸಿವು, ಮಹಿಳಾ ಮತ್ತು ಮಕ್ಕಳ ಅಪೌಷ್ಟಿಕತ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಒಟ್ಟು 24 ಬೇಡಿಕೆಯಳನಿಟ್ಟು ಈ ಮಹಾಧರಣಿಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಹಕ್ಕೊತ್ತಾಯಗಳು
- 1.ರೈತರ ಉತ್ಪನ್ನಗಳಿಗೆ ಎಂ.ಎಸ್.ಸ್ವಾಮಿನಾಥನ್ ಶಿಫಾರಸ್ಸಿನ ಸೂತ್ರ ಸಿ2+50% ಪ್ರಕಾರ ಕನಿಷ್ಟ ಬೆಂಬಲ ಬೆಲೆ ಹಾಗೂ ಖರೀದಿ ಖಾತ್ರಿ ಒದಗಿಸುವ ಶಾಸನ ಜಾರಿ ಮಾಡಬೇಕು. ರೈತರಿಗೆ ನೀಡುವ ಬಿತ್ತನೆ ಬೀಜ, ರಸಗೊಬ್ಬರ ಹಾಗೂ ವಿದ್ಯುಚ್ಚಕ್ತಿ ಮೇಲಿನ ಸಬ್ಸಿಡಿ ಮೊತ್ತ ಹೆಚ್ಚಳವಾಗಬೇಕು. ರೈತರ ಆತ್ಮಹತ್ಯೆ ತಡೆಯಲು ಎಲ್ಲಾ ರೀತಿಯ ಅಗತ್ಯ ಕ್ರಮ ಕೈಗೊಳ್ಳಬೇಕು.
- 2. ಕರ್ನಾಟಕ ಸರ್ಕಾರವು 2020ರಲ್ಲಿ ಜಾರಿಗೊಳಿಸಿದ ಕರ್ನಾಟಕ ರಾಜ್ಯ ಭು ಸುಧಾರಣಾ ತಿದ್ದುಪಡಿ ಕರ್ನಾಟಕ ಕರ್ನಾಟಕ ಜಾನುವಾರು ತಿದ್ದುಪಡಿ ಕಾಯ್ದೆಗಳನ್ನು ರದ್ದುಪಡಿಸಬೇಕು. ಅಂತೆಯೇ 2023ರಲ್ಲಿ ಜಾರಿಗೆ ತಂದಿದ್ದ ಕಾರ್ಮಿರ ಕೆಲಸದ ಅವದಿಯನ್ನು 8 ರಿಂದ 12ಗಂಟೆಗೆ ಏರಿಸಿರುವ ತಿದ್ದುಪಡಿಯನ್ನು ರದ್ದುಗೊಳಿಸಬೇಕು.
- ರಾಷ್ಟ್ರೀಯ ಕನಿಪ್ಪ ವೇತನ ಮಾಸಿಕ 26,000 ರೂ ನಿಗದಿ, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ, ಖಾಯಂ ಸ್ವರೂಪದ ಕೆಲಸದಲ್ಲಿ ತೊಡಗುವ ಕಾರ್ಮಿಕರ ಖಾಯಂಗೆ ಶಾಸನ ರೂಪಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು, ಈಖಿಇ ಪದ್ಧತಿಯನ್ನು ಹಾಗೂ ಕೆಲಸದ ಅವಧಿಯ ಹೆಚ್ಚಳವನ್ನು ರದ್ದುಪಡಿಸಬೇಕು.
- 4. ಕಾರ್ಪೋರೇಟ್ ಪರವಾದ ಪಿಎಂ ಫಸಲ್ ಭೀಮಾ ಯೋಜನೆಯನ್ನು ರದ್ದುಪಡಿಸಿ, ಎಲ್ಲಾ ಬೆಳೆಗಳಿಗೂ ವಿಮೆ ಒದಗಿಸುವ ಸಮಗ್ರ ಸಾರ್ವಜನಿಕ ವಿಮಾ ಯೋಜನೆ ಜಾರಿ ಹಾಗೂ ಸಮಗ್ರ ಸಾಲ ಮನ್ನಾ ಯೋಜನೆ ಜಾರಿಗೆ ತರಬೇಕು.
- 5. ಐತಿಹಾಸಿಕ ದೆಹಲಿ ರೈತ ಹೋರಾಟದ ಸಂದರ್ಭದಲ್ಲಿ ನೀಡಿದ್ದ ಲಿಖಿತ ಭರವಸೆಗಳನ್ನು ಜಾರಿ ಮಾಡಬೇಕು. ಸಿಂಗು ಗಡಿಯಲ್ಲಿ ಹುತಾತ್ಮ ರೈತರ ಸ್ಮಾರಕ ನಿರ್ಮಿಸಲು ಜಾಗ, ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮನರ್ವಸತಿ ಕಲ್ಪಿಸಬೇಕು. ಹೋರಾಟ ಸಂದರ್ಭದಲ್ಲಿ ರೈತರ ಮೇಲೆ ಹಾಕಿರುವ ಎಲ್ಲಾ ಪೋಲಿಸ್ ಕೇಸ್ಗಳನ್ನು ವಾಪಸ್ಸು ಪಡೆಯಬೇಕು.
- 6. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕು, ಖಾಲಿಯಿರುವ ಎಲ್ಲಾ ಉದ್ಯೋಗಗಳನ್ನು ಭರ್ತಿ ಮಾಡಬೇಕು. ನಿರುದ್ಯೋಗಿ ಯುವಜನತೆಗೆ ಕೆಲಸ ಒದಗಿಸಲು, ಉದ್ಯೋಗ ಸೃಷ್ಟಿಸಲು ಸಾರ್ವಜನಿಕ ಹೂಡಿಕೆ ಹೆಚ್ಚಿಸಬೇಕು. ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ ಕೆಲಸ ದಿನಗಳನ್ನು 200 ದಿನಕ್ಕೆ ವಿಸ್ತರಿಸಿ, ರೂ.600 ಕೂಲಿ ನಿಗದಿ ಮಾಡಬೇಕು.
- 7. ಗೃಹ ಆಧಾರಿತ ಕಾರ್ಮಿಕರಿಗೆ ILO ಸಮ್ಮೇಳನ ಶಿಫಾರಸ್ಸುಗಳ ಬಾತ್ರಿಗೆ ಸೂಕ್ತ ಕಾನೂನು ರಚಿಸಬೇಕು. ಅಂತರ್ ರಾಜ್ಯ ವಲಸೆ ಕಾರ್ಮಿಕರ (ಉದ್ಯೋಗ ನಿಯಂತ್ರಣ) ಕಾಯ್ದೆ 1979ನ್ನು ಸಾಮಾಜಿಕ ಸುರಕ್ಷತಾ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಬಲಪಡಿಸಬೇಕು.
- 8, ಭಾರತೀಯ ಕಾರ್ಮಿಕ ಸಮ್ಮೇಳನವನ್ನು ನಿಯಮಿತವಾಗಿ ಆಯೋಜಿಸಬೇಕು. ಅದರ ನಿರ್ಣಯಗಳನ್ನು ಸರ್ಕಾರಗಳು ಜಾರಿ ಮಾಡಬೇಕು.
- 9. ಹೊಸ ಪಿಂಚಣಿ ಯೋಜನೆ(NPS)ನ್ನು ರದ್ದು ಮಾಡಿ, ಹಳೇ ಪಿಂಚಣಿ ಯೋಜನೆ(EPS), ಜಾರಿ ಮಾಡಬೇಕು.
- 10. ಬೆಲೆ ಏರಿಕೆ ನಿಯಂತ್ರಿಸಬೇಕು. ಆಗತ್ಯ ವಸ್ತುಗಳಾದ ಆಹಾರ, ಔಷಧಿ, ನೇಕಾರಿಕೆ, ಯಂತ್ರೋಪಕರಣಗಳ ಮೇಲಿನ ಜಿ.ಎಸ್ ರದ್ದುಪಡಿಸಬೇಕು. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ಮೇಲಿನ ಕೇಂದ್ರೀಯ ತೆರಿಗೆಯನ್ನು ಗಣನೀಯವಾಗಿ ಇಳಿಕೆ ಮಾಡಬೇಕು.
- 11. ಕೋವಿಡ್ ನೆಪದಲ್ಲಿ ಹಿರಿಯ ನಾಗರೀಕರು, ಮಹಿಳೆಯರು, ಅಂಗವಿಕಲರು, ಕ್ರೀಡಾಪಟುಗಳಿಗೆ ರದ್ದುಪಡಿಸಿದ್ದ ರೈಲ್ವೆ ಪ್ರಯಾಣ ರಿಯಾಯಿತಿಯನ್ನು ಮನ’ ಸ್ಥಾಪಿಸಬೇಕು. ರೈಲ್ವೆ ಖಾಸಗೀಕರಣ ನಿಲ್ಲಿಸಬೇಕು.
- 12. ಆಹಾರ ಭದ್ರತೆ, ಪೋಷಕಾಂಶ ಸುರಕ್ಷತೆಯನ್ನು ಖಾತರಿಪಡಿಸಬೇಕು. ಸಾರ್ವತಿಕ ಪಡಿತರ ವ್ಯವಸ್ಥೆ ಜಾರಿಗೊಳಿಸಬೇಕು. ಜೀವನಾವಶ್ಯಕ ಅಗತ್ಯ ವಸ್ತುಗಳನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆ ಮೂಲಕ ವಿತರಿಸಬೇಕು, ನೇರ ನಗದು ವರ್ಗಾವಣೆ ರದ್ದುಪಡಿಸಬೇಕು.
- 13.ಉಚಕ ಶಿಕ್ಷಣ, ಉಚಿತ ಆರೋಗ್ಯ ಸೇವೆ, ಉಚಿತ ನೀರು ಮತ್ತು ನೈರ್ಮಲ್ಯವನ್ನು ಮೂಲಭೂತ ಹಕ್ಕಾಗಿ ಒದಗಿಸಬೇಕು. ಜನ ವಿರೋಧಿ ರಾಷ್ಟ್ರೀಯ ಶಿಕ್ಷಣ ನೀತಿ(ಓಣಕ) -2020 ರದ್ದಾಗಬೇಕು.
- 14. ಪ್ರತಿಯೊಬ್ಬರಿಗೂ ವಸತಿ ಹಕ್ಕು ಖಾತ್ರಿಪಡಿಸಬೇಕು, ಬಲವಂತದ ಭೂ ಸ್ವಾಧೀನ ನಿಲ್ಲಿಸಿ ಪರಿಹಾರ ಕ್ರಮ ವೈಜ್ಞಾನಿಕ, ರೈತ ಸ್ನೇಹಿಯಾಗಿರಬೇಕು, ಬಗರ್ ಹುಕುಂ ಸಾಗುವಳಿಗಾರರು ಸೇರಿದಂತೆ ಎಲ್ಲಾ ಉಳುಮ ರೈತರಿಗೆ ಭೂಮಿ ಹಕ್ಕು ಖಾತರಿಪಡಿಸಬೇಕು.
- 15.ಆರಣ್ಯ ಹಕ್ಕು ಕಾಯ್ದೆ-2006ನ್ನು ಕಟ್ಟುನಿಟ್ಟಾಗಿ ಜಾರಿ ಮಾಡಬೇಕು. ಕಾರ್ಪೊರೇಟ್ ಸ್ನೇಹಿ ಅರಣ್ಯ
- ಸಂರಕ್ಷಣಾ ತಿದ್ದುಪಡಿ ಕಾಯ್ದೆ-2023 ಹಾಗೂ ಜೀವ ವೈವಿಧ್ಯ ಕಾಯ್ದೆಯನ್ನು ರದ್ದುಪಡಿಸಬೇಕು. 16. ಎಲ್ಲಾ ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ನಿಲ್ಲಬೇಕು. ರಾಷ್ಟ್ರೀಯ ನಗದೀಕರಣ ಪೈಪ್ಲೈನ್ ಯೋಜನೆ ರದ್ದಾಗಬೇಕು.
- 17.ಖನಿಜ ಹಾಗೂ `ಲೋಹ ಗಣಿಗಾರಿಕೆ ಕಾಯ್ದೆಗೆ ತಿದ್ದುಪಡಿ ಮಾಡಿ ಕಲ್ಲಿದ್ದಲು ಸೇರಿದಂತೆ ಗಣಿ ಕಂಪನಿಗಳ ಲಾಭದ ಶೇ.50ರಷ್ಟನ್ನು ಆದಿವಾಸಿಗಳು, ರೈತರು, ಮುಂತಾದ ಸ್ಥಳೀಯ ನಿವಾಸಿಗಳ ಅಭಿವೃದ್ಧಿಗೆ ಬಳಸಬೇಕು.
- 18. ವಿದ್ಯುತ್ ರಂಗವನ್ನು ಖಾಸಗೀಕರಣಗೊಳಿಸುವ ವಿದ್ಯುತ್ ತಿದ್ದುಪಡಿ ಮಸೂದೆ 2022ನ್ನು ಸಂಸತ್ತಿನಿಂದ ವಾಪಸ್ಸು ಪಡೆಯಬೇಕು. ಯಾವುದೇ ಕಾರಣಕ್ಕೂ ಶ್ರೀ ಪೇಯ್ಡ್ ಮೀಟರ್ ಆಳವಡಿಸಬಾರದು.
- 19. ಎಲ್ಲಾ ರೀತಿಯ ಆಸಂಘಟಿತ ವಲಯದ ಕಾರ್ಮಿಕರನ್ನು ನೊಂದಾಯಿಸಿ, ಪಿಂಚಣಿ ಸೇರಿದಂತೆ ಸಮಗ್ರ ಸಾಮಾಜಿಕ ಸುರಕ್ಷೆತೆಯನ್ನು ಒದಗಿಸಬೇಕು. ಇಶ್ರಮ್ ಪೋರ್ಟಲ್ನಲ್ಲಿ ನೊಂದಾಯಿಸಿರುವ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆ, ತಾಯ್ತನದ ಆರೈಕೆ ಸೌಲಭ್ಯ, ಜೀವ ಹಾಗೂ ಅಂಗವೈಕಲ್ಯ ವಿಮೆ, ಮತ್ತಿತರ ಕಲ್ಯಾಣ ಸೌಲಭ್ಯಗಳನ್ನು ಒದಗಿಸಬೇಕು.
- 20. ಐಸಿಡಿಎಸ್, ಅಕ್ಷರ ದಾಸೋಹ, ಆಶಾ ಮುಂತಾದ ಯೋಜನೆಗಳನ್ನು ಯಾವುದೇ ಸ್ವರೂಪದಲ್ಲಿ ಖಾಸಗೀಕರಣ ಮಾಡಬಾರದು, ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ಸಮರ್ಪಕವಾಗಿ ಜಾರಿ ಮಾಡಬೇಕು.
- 21, ಕಲ್ಯಾಣ ಮಂಡಳಿಯ ನಿಧಿ ದುರ್ಬಳಕೆ ನಿಲ್ಲಿಸಿ, ಕಟ್ಟಡ ಕಾರ್ಮಿಕರಿಗೆ ಜಾರಿಯಲ್ಲಿರುವ ಸೌಲಭ್ಯಗಳ ಜೊತೆಗೆ ಇಎಸ್ಐ, ವಸತಿ ಸೌಲಭ್ಯವನ್ನು ಒದಗಿಸಬೇಕು. ಬಾಕಿ ಇರುವ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು.
- 22. ಸಂವಿಧಾನದ ಮೂಲಭೂತ ಹಕ್ಕುಗಳಾದ ಅಭಿವ್ಯಕ್ತಿ ಸ್ವಾತಂತ್ರ್ಯ ಧಾರ್ಮಿಕ ಸ್ವಾತಂತ್ರ್ಯ, ಭಾಷೆ, ವೈವಿಧ್ಯತೆ, ಸಾಂಸ್ಕೃತಿಕತೆ, ಸಮಾನತೆ, ಜಾತ್ಯಾತೀಶತೆ, ಒಕ್ಕೂಟ ವ್ಯವಸ್ಥೆ ಮುಂತಾದವುಗಳ ಮೇಲಿನ ಆಕ್ರಮಣವನ್ನು ಕೇಂದ್ರ ಸರ್ಕಾರ ನಿಲ್ಲಿಸಬೇಕು.
- 23.ರೈತ ಮಹಿಳೆಯರನ್ನು ರೈತರು ಎಂದು ಪರಿಗಣಿಸಿ ರೈತರಿಗೆ ಸಿಗುವ ಎಲ್ಲಾ ಸೌಲಭ್ಯ ಸಿಗುವಂತಾಗಬೇಕು ಮತ್ತು ಎಸ್ಚ್ ಮತ್ತು ಮೈಕ್ರೋಫೈನಾನ್ಸ್ಗಳಿಂದ ಕೃಷಿಗಾಗಿ ಪಡೆದ ಸಾಲ ಮನ್ನಾ ಮಾಡಬೇಕು.
- 24, ಮಹಿಳೆ, ದಲಿತ, ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯ, ಲೈಂಗಿಕ ಕಿರುಕುಳ,ಆತ್ಯಾಚಾರ ಹಾಗೂ ಜಾತಿ, ಧರ್ಮ, ಹಂತಸ್ತುಗಳ ಹೆಸರುಗಳಲ್ಲಿ ನಡೆಯುತ್ತಿರುವ ಮರ್ಯಾದೆಗೇಡು ಹತ್ಯೆ, ಹಿಂಸೆ ತಡೆಗಟ್ಟಲು ಕಾನೂನು ಮತ್ತು ತ್ವರಿತ ಮಹಿಳಾ ನ್ಯಾಯಾಲಯಗಳನ್ನು ಸ್ಥಾಪಿಸಲು ಒತ್ತಾಯ ಮಾಡಲಾಗುವುದು ಎಂದರು.
ಗೋಷ್ಠಿಯಲ್ಲಿ ಸಿಐಟಿಯು ಜಿಲ್ಲಾಧ್ಯಕ್ಷ ಎಂ.ಎಂ ಶಿವಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಕುಮಾರಿ, ಕರ್ನಾಟಕ ಪ್ರಾಂತ ಕೂಲಿಕಾರರ ಸಂಘದ ಮಳವಳ್ಳಿ ತಾಲ್ಲೂಕು ಅಧ್ಯಕ್ಷ ಎನ್.ಎಲ್.ಭರತ್ ರಾಜ್, ಎಐಎಡಬ್ಲ್ಯೂಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಹನುಮೇಶ್, ಮದ್ದೂರು ತಾಲ್ಲೂಕು ಕಾರ್ಯದರ್ಶಿ ಟಿ.ಆರ್.ಸಿದ್ದೇಗೌಡ ಉಪಸ್ಥಿತರಿದ್ದರು.




