Thursday, September 19, 2024

ಪ್ರಾಯೋಗಿಕ ಆವೃತ್ತಿ

30 ಪಿಂಚಣಿ – 5 ಪೌತಿ ಖಾತೆಗಳ ಅರ್ಜಿ ವಿಲೇವಾರಿ

ಕೆ.ಆರ್.ಪೇಟೆ ತಾಲ್ಲೂಕಿನ ಅಗ್ರಹಾರ ಬಾಚಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ 30 ಪಿಂಚಣಿ ಅರ್ಜಿಗಳು, ಪೌತಿ ಖಾತೆಗೆ ಸಂಬಂಧಿಸಿದಂತೆ 5 ಅರ್ಜಿಗಳನ್ನು ವಿಲೇವಾರಿ ಮಾಡಲಾಯಿತು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮಕ್ಕೆ 15 ದಿನ ಮುಂಚಿತವಾಗಿ ಸಂತೆಬಾಚಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮದ ಜನರಿಗೆ ಮಾಹಿತಿ ನೀಡಿ, ಕುಂದುಕೊರತೆಗಳ ಬಗ್ಗೆ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಈ ಪೈಕಿ ಗ್ರಾಮದಲ್ಲಿ ಪಹಣಿ ತಿದ್ದುಪಡಿಗೆ ಸಂಬಂಧಿಸಿದಂತೆ 25 ಅರ್ಜಿಗಳು ಸ್ವೀಕೃತವಾಗಿದ್ದವು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ

ಅಧಿಕಾರಿಗಳು ಸಾರ್ವಜನಿಕರ ಸಮಸ್ಯಗಳಿಗೆ ಸ್ಪಂದಿಸಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಅಗ್ರಹಾರ ಬಾಚಳ್ಳಿ ಗ್ರಾಮದಲ್ಲಿ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮಸ್ಥರು ಇಂದು ಸಹ  ಮುಕ್ತವಾಗಿ ಶಾಲಾ ಕಟ್ಟಡ, ಬಸ್, ರಸ್ತೆ, ಆಸ್ಪತ್ರೆಗೆ ಯಾವುದೇ ಸಮಸ್ಯೆ ಇದ್ದಲ್ಲಿ ಅರ್ಜಿ ಸಲ್ಲಿಸಬಹುದು. ಸಾರ್ವಜನಿಕರಿಗೆ ಮಾಹಿತಿ ಒದಗಿಸಲು ವಿವಿಧ ಇಲಾಖೆ ಅವರು ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಮಳಿಗೆಗಳನ್ನು ಅನಾವರಣಗೊಳಿಸಿದ್ದಾರೆ. ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

nudikarnataka,com

ಕೇಂದ್ರ ಸರ್ಕಾರ ಎ.ಪಿ.ಎಲ್, ಬಿ.ಪಿ ಎಲ್ ಕಾರ್ಡ್‍ದಾರರಿಗೆ ಆರೋಗ್ಯ ಸೇವೆ ಒದಗಿಸಲು ಆಯುಷ್ಮಾನ್ ಆರೋಗ್ಯ ಕಾರ್ಡ್ ನೀಡುತ್ತಿದೆ. ಅಗ್ರಹಾರಬಾಚಳ್ಳಿಯಲ್ಲಿ 3000 ಜನಸಂಖ್ಯೆ ಇದ್ದು, 600 ಜನರು ಮಾತ್ರ ಕಾರ್ಡ್ ಪಡೆದುಕೊಂಡಿದ್ದಾರೆ. ಇದು ಉತ್ತಮ ಯೋಜನೆಯಾಗಿದ್ದು ಕಾರ್ಡ್ ಉಚಿತವಾಗಿ ನೀಡಲಾಗುತ್ತಿದೆ. ಎಲ್ಲರೂ ಆಯುಷ್ಮಾನ ಕಾರ್ಡ್‍ಗೆ ನಿಗದಿತ ದಾಖಲಾತಿ ನೀಡಿ ಪಡೆದುಕೊಳ್ಳಲು ಸಲಹೆ ನೀಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಿ, ಹೆಸರು ಸೇರ್ಪಡೆ, ಕೈಬಿಡಲು, ಸ್ಥಳಾಂತರ ಕುರಿತಂತೆ ಅರ್ಜಿ ಸ್ವೀಕರಿಸಲಾಗಿದೆ. ಅರ್ಜಿಗಳ ಪರಿಶೀಲನೆ ನಡೆಸಲಾಗುತ್ತಿದ್ದು, ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಮತದಾರರ ಪಟ್ಟಿಯಲ್ಲಿ ಹೆಸರು ಇದ್ದರೆ ಮಾತ್ರ ಮತದಾನ ಮಾಡಬಹುದು. ಚುನವಣಾ ಗುರುತಿನ ಚೀಟಿ ಇದ್ದು, ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೆ ಮತದಾನ ಮಾಡಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಇರುವುದನ್ನು ಖಾತ್ರಿ ಮಾಡಿಕೊಳ್ಳಿ ಎಂದರು.

ಅಗ್ರಹಾರ ಬಾಚಳ್ಳ ಪಂಚಾಯಿತಿ ವ್ಯಾಪ್ತಿಯಲ್ಲಿ 13 ಗ್ರಾಮಗಳಿದ್ದು, ಸ್ಮಶಾನ ಮಂಜೂರು ಮಾಡಲಾಗಿದೆ. ಸ್ಥಳದ ಹದ್ದುಬಸ್ತು ಮಾಡಿ, ಪಂಚಾಯಿತಿಗೆ ಹಸ್ತಾಂತರಿಸಲಾಗಿದೆ. ಆಶ್ರಯ ಯೋಜನೆಗೆ ಮಂಜೂರು ಮಾಡಲಾಗಿರುವ ಜಾಗದ ಹದ್ದು ಬಸ್ತು ಸಹ ಮಾಡಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಕಂದಾಯ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭೀಣಿ ಸ್ತ್ರೀಯರಿಗೆ ಶೀಮಂತ, ಹೆಣ್ಣು ಮಕ್ಕಳಿಗೆ ಎಸ್.ಎಸ್.ವೈ ಕಾರ್ಡ್, ಕಾರ್ಮಿಕ ಇಲಾಖೆ ವತಿಯಿಂದ ಈ ಶ್ರಮ್ ಕಾರ್ಡ್, ಸ್ವಸಹಾಯ ಮಹಿಳಾ ಸಂಘಗಳಿಗೆ ಚೆಕ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಮೊಹಮ್ಮದ್ ಅಕ್ರಂ ಪಾಷ, ಕೆ.ಆರ್.ಪೇಟೆ ತಹಶೀಲ್ದಾರ್ ರೂಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜವರೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!