Thursday, October 10, 2024

ಪ್ರಾಯೋಗಿಕ ಆವೃತ್ತಿ

ದೆಹಲಿಯ 4 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ದುರಂತದಲ್ಲಿ 27 ಸಾವು

ದೆಹಲಿ : ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ವಾಣಿಜ್ಯ ಕಟ್ಟಡದಲ್ಲಿ ಶುಕ್ರವಾರ ಸಂಜೆ ಭಾರಿ ಬೆಂಕಿ ಅವಘಡ ಸಂಭವಿಸಿ ಕನಿಷ್ಠ 27 ಜನರು ಸಾವನ್ನಪ್ಪಿದ್ದು 40 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಶ್ಚಿಮ ದೆಹಲಿಯ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇಂದು ಸಂಜೆ ಸಂಭವಿಸಿದ ಭಾರೀ ಆಗ್ನಿ ಅನಾಹುತವು ಅನೇಕ ಜೀವಗಳನ್ನು ಬಲಿ ತೆಗೆದುಕೊಂಡಿದೆ. ಇದುವರೆವಿಗೂ 27 ಮೃತದೇಹಗಳು ಪತ್ತೆಯಾಗಿದ್ದು, ಇದರ ಸಂಖ್ಯೆ ಹೆಚ್ಚಾಗಬಹುದೆಂಬ ಆತಂಕವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಕಟ್ಟಡದ ಸಂಪೂರ್ಣ ಮಹಡಿಯನ್ನು ಇನ್ನೂ ಶೋಧಿಸಬೇಕಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿಯನ್ನು ನಂದಿಸಲಾಗಿದ್ದು, ರಕ್ಷಣಾ ಕಾರ್ಯದತ್ತ ಗಮನ ಹರಿಸಲಾಗಿದೆ.

40ಕ್ಕೂ ಹೆಚ್ಚು ಮಂದಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡದಿಂದ ಸುಮಾರು 60-70 ಜನರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಇದು ಗೋಡೌನ್ ಮತ್ತು ಕಛೇರಿಯಾಗಿದ್ದು, ಬಹಳ ಮಂದಿ ಒಳಗೆ ಸಿಲುಕಿಕೊಂಡಿದ್ದಾರೆ, ಅವರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ ಎಂದು ದೆಹಲಿಯ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಸುನಿಲ್ ಚೌಧರಿ ಹೇಳಿದ್ದಾರೆ.

ವಾಣಿಜ್ಯ ಕಟ್ಟಡ ಮುಖ್ಯವಾಗಿ ಕಚೇರಿ ಸ್ಥಳವನ್ನು ಹೊಂದಿದ್ದು ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿ ಇದೆ. ಅಗ್ನಿಶಾಮಕ ಇಲಾಖೆ ಅಧಿಕಾರಿಗಳ ಪ್ರಕಾರ, ಬೆಂಕಿ ಅವಘಡದ ಬಗ್ಗೆ ಸಂಜೆ 4.40 ಕ್ಕೆ ಮಾಹಿತಿ ಬಂದಿತು, ನಂತರ 20 ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಲಾಯಿತು ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಸಿಸಿಟಿವಿ ಕ್ಯಾಮೆರಾ ಮತ್ತು ರೂಟರ್ ತಯಾರಿಕಾ ಕಂಪನಿಯ ಕಚೇರಿಯನ್ನು ಹೊಂದಿರುವ ಕಟ್ಟಡದ ಮೊದಲ ಮಹಡಿಯಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಉಪ ಪೊಲೀಸ್ ಆಯುಕ್ತ (ಹೊರ) ಸಮೀರ್ ಶರ್ಮಾ ತಿಳಿಸಿದ್ದಾರೆ.

“ದೆಹಲಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ಸಂಭವಿಸಿದ ಪ್ರಾಣಹಾನಿಯಿಂದ ಅತೀವ ದುಃಖವಾಗಿದೆ. ನನ್ನ ಆಲೋಚನೆಗಳು ದುಃಖತಪ್ತ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ ₹ 2 ಲಕ್ಷ  ಪರಿಹಾರ ನೀಡುವುದಾಗಿ ಪ್ರಧಾನಿ ಹೇಳಿದ್ದಾರೆ. ಗಾಯಗೊಂಡವರಿಗೆ   50,000 ಪರಿಹಾರ ನೀಡಲಾಗುವುದು ಎಂದು ಅವರ ಕಚೇರಿ ಟ್ವೀಟ್ ಮಾಡಿದೆ.

ದೆಹಲಿ ದುರಂತದ ಬಗೆಗೆ ದೆಹಲಿ ಪ್ರಧಾನಿ ಅರವಿಂದ ಕೇಜ್ರಿವಾಲ್ ಸಹ ಟ್ವೀಟ್ ಮಾಡಿದ್ದಾರೆ.

ಈ ದುರಂತ ಘಟನೆಯ ಬಗ್ಗೆ ತಿಳಿದು ಆಘಾತ ಮತ್ತು ನೋವಾಗಿದೆ. ನಾನು ನಿರಂತರವಾಗಿ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇನೆ. ನಮ್ಮ ಕೆಚ್ಚೆದೆಯ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಿಸಲು ಮತ್ತು ಜೀವಗಳನ್ನು ಉಳಿಸಲು ಪ್ರಯತ್ನಿಸುತ್ತಿದ್ದಾರೆ. ದೇವರು ಎಲ್ಲರನ್ನು ಆಶೀರ್ವದಿಸಲಿ.

“ದೆಹಲಿಯ ಮುಂಡ್ಕಾ ಮೆಟ್ರೋ ನಿಲ್ದಾಣದ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಿಂದ ದುಃಖಿತವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಬಯಸುತ್ತೇನೆ” ಎಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕಚೇರಿ ಟ್ವೀಟ್ ಮಾಡಿದೆ.

13-5-2022 ರಂದು ಮುಂಡ್ಕಾ ಅಗ್ನಿ ಅವಘಡದಲ್ಲಿ ಗಾಯಗೊಂಡವರ ಪಟ್ಟಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!