Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆಪರಾಧಿಗೆ 4 ವರ್ಷ ಸಜೆ- ₹20 ಸಾವಿರ ದಂಡ

17 ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ ಬಲವಂತವಾಗಿ ಬಾಲ್ಯ ವಿವಾಹ ಮಾಡಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಜೇಶ್ ಎಂಬ ವ್ಯಕ್ತಿಗೆ ಪೋಕ್ಸೋ ವಿ‍ಶೇಷ ನ್ಯಾಯಾಯಲ 4 ವರ್ಷ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ.

ಮೇಲುಕೋಟೆ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದ ಬಗ್ಗೆ ಅಂದಿನ ಪಿ.ಎಸ್.ಐ ಗಿರಿಧರ್ ದೋಷಾರೋಪಣಾ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೋ ನ್ಯಾಯಾಲಯದಲ್ಲಿ ವಿಶೇಷ ನ್ಯಾಯಾಧೀಶರಾದ ಶಬಾನಾ ಬೇಗಂ ಲಾಡ್‌ಖಾನ್‌ ಅವರು ಆರೋಪಿ ರಾಜೇಶನಿಗೆ ಕಲಂ: 363 ಐ.ಪಿ.ಸಿ ಗೆ 1 ವರ್ಷ ಸಾದಾ ಸಜೆ ಮತ್ತು 5000 ರೂ. ದಂಡ ಹಾಗೂ ಕಲಂ:8 ರ ಪೋಕ್ಸೋ ಕಾಯಿದೆ ಅಪರಾಧಕ್ಕೆ 3 ವರ್ಷಗಳ ಸಾದಾ ಸಜೆ ಮತ್ತು 15,000ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಅಭಿಯೋಜನೆಯ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಜೆ.ಪೂರ್ಣಿಮಾ ವಾದ ಮಂಡಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!