Saturday, May 18, 2024

ಪ್ರಾಯೋಗಿಕ ಆವೃತ್ತಿ

₹40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ

40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಮಳವಳ್ಳಿ ಪುರಸಭೆಯ ಸಮುದಾಯ ವ್ಯವಹಾರ ಅಧಿಕಾರಿ ಆರ್.ನಾಗೇಂದ್ರ ಸಿಕ್ಕಿ ಬಿದ್ದಿದ್ದಾರೆ.

ಶ್ರೀರಂಗಪಟ್ಟಣ ಪುರಸಭೆ ಕಚೇರಿಯಲ್ಲಿ ಲಂಚ ಪಡೆಯುವಾಗ ನಾಗೇಂದ್ರ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ₹1 ಲಕ್ಷದ 20 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದ ನಾಗೇಂದ್ರ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ಮೂಲದ ಶಿವರಾಜ್ ಹೊಳ್ಳಾಲ್ ಎಂಬುವವರು ವಿಕಲಚೇತನರಿಗೆ ನೀಡಿದ್ದ ವಾಹನಗಳನ್ನು ವಿತರಿಸಿದ್ದರು. ಇದರ ಬಾಕಿ ಹಣ ಬಿಡುಗಡೆಗೆ ನಾಗೇಂದ್ರ 1.20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶಿವರಾಜ್ ಹೊಳ್ಳಾಲ್  ಮಂಡ್ಯ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಅದರಂತೆ ಇಂದು ಡಿವೈಎಸ್ಪಿ ಸುನೀಲ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ನಾಗೇಂದ್ರ ಅವರನ್ನು ಬಂಧಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!