Thursday, November 19, 2026

ಪ್ರಾಯೋಗಿಕ ಆವೃತ್ತಿ

ಧಾರವಾಡ | ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಕನ್ನಡ ಪುಸ್ತಕಗಳ ಮಾರಾಟ

ಗಣರಾಜ್ಯೋತ್ಸವದ ದಿನಾಚರಣೆಯ ಅಂಗವಾಗಿ 2025 ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50 ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ (ದೂರವಾಣಿ ಸಂಖ್ಯೆ: 080-22107705) ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್‍ಲೈನ್ https://kpp.karnataka.gov.in  (ಆನ್‍ಲೈನ್ ಪುಸ್ತಕ ಖರೀದಿಗೆ ಇಲ್ಲಿ ವೀಕ್ಷಿಸಿ ವಿಭಾಗ) ನಲ್ಲಿ ಕೂಡ ಈ ಶೇ. 50 ರಷ್ಟು ರಿಯಾಯಿತಿ ಲಭ್ಯವಿರುತ್ತದೆ.

ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಇಲ್ಲಿಯವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ. ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದಾಗಿದ್ದು, ಓದುಗರ ಅನುಕೂಲಕ್ಕಾಗಿ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

1 COMMENT

  1. ಸಕಾಲದಲ್ಲಿ ಮಾಹಿತಿ ಒದಗಿಸುವ
    ನುಡಿ ಕರ್ನಾಟಕ ನನಗೆ ಅಚ್ಚು ಮೆಚ್ಚು

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ