ಶ್ರೀರಂಗಪಟ್ಟಣ ಕ್ರೀಡಾಂಗಣದಲ್ಲಿ 50 ಲಕ್ಷ ರೂ.ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ಇಂದು ಗುದ್ದಲಿ ಪೂಜೆ ನೆರವೇರಿಸಿದರು.
ಇಂದು ಕ್ರೀಡಾಂಗಣದ ಆವರಣದಲ್ಲಿ ಗುದ್ದಲಿ ಪೂಜೆ ಮಾಡುವ ಮೂಲಕ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾಂಗಣವನ್ನು ಅಭಿವೃದ್ಧಿಪಡಿಸುವ ಮೂಲಕ ತಾಲೂಕಿನ ಜನರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದರು.
ಒಳಾಂಗಣ ಕ್ರೀಡಾಂಗಣ,ಮೇಲ್ಛಾವಣಿಯ ಅಭಿವೃದ್ಧಿ ಸೇರಿದಂತೆ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿ ಮಾಡಲಾಗುವುದು. ಅಲ್ಲದೆ ವಿವಿಧ ರೀತಿಯ ಕ್ರೀಡಾ ಸಲಕರಣೆಗಳನ್ನು ನೀಡುವ ಮೂಲಕ ಸುಸಜ್ಜಿತ ಕ್ರೀಡಾಂಗಣವನ್ನು ಸಾರ್ವಜನಿಕರಿಗೆ ಒದಗಿಸಿ ಕೊಡಲಾಗುವುದು. ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಡೆಯುವಂತೆ ನೋಡಿಕೊಂಡು ಶೀಘ್ರ ಕ್ರೀಡಾಂಗಣ ಅಭಿವೃದ್ಧಿಪಡಿಸಲಾಗುವುದು ಎಂದರು.