Friday, September 20, 2024

ಪ್ರಾಯೋಗಿಕ ಆವೃತ್ತಿ

50 ವರ್ಷಗಳಿಂದ ಅಧಿಕಾರ ನಡೆಸಿದ ಕಾಂಗ್ರೆಸ್ ಕೊಡುಗೆ ಏನು ? : ಶಾಸಕ ಸುರೇಶ್‌ಗೌಡ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದುರಾಡಳಿತ ನಡೆಸುತ್ತಿದ್ದು ಕಾಂಗ್ರೆಸ್ ಮತ್ತು ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ಕಳೆದ 50 ವರ್ಷಗಳಿಂದ ಅಧಿಕಾರ ನಡೆಸಿದ ಕಾಂಗ್ರೆಸ್ ಕೊಡುಗೆ ಏನೆಂದು ಶಾಸಕ ಸುರೇಶ್‌ಗೌಡ ಪ್ರಶ್ನಿಸಿದರು.

ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಹೊಸಗಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಆಯೋಜಿಸಿದ್ದ ಯುಗಾದಿ ಜೆಡಿಎಸ್ ಜಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರೈತರು ಆತ್ಮಹತ್ಯೆ ಮಾಡಿಕೊಳ್ಳಬಾರದೆಂದು ಉದ್ದೇಶದಿಂದ ಪಂಚರತ್ನ ಯಾತ್ರೆ ಕೈಗೊಂಡಿರುವ ಜತೆಗೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ 60 ವರ್ಷ ಮೇಲ್ಪಟ್ಟವರಿಗೆ 5 ಸಾವಿರ ರೂ. ಪಿಂಚಣಿ, ಮಹಿಳೆಯರಿಗೆ 2500, ವಿಕಲಚೇತನರಿಗೆ ಹಾಗೂ ಟನ್‌ಕಬ್ಬಿಗೆ 6 ಸಾವಿರ ರೂ. ಮತ್ತು ತೊಗರಿ ಬೇಳೆ ಟನ್‌ಗೆ 15 ಸಾವಿರ ವಿತರಿಸಲು ಯೋಜನೆ ರೂಪಿಸಿರುವುದಾಗಿ ಹೇಳಿದರು.

ರೈತರ ಮಕ್ಕಳನ್ನು ಮದುವೆಯಾಗುವವರಿಗೆ 2 ಲಕ್ಷ.ರೂ ಸಾಲ ಸೌಲಭ್ಯ ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ಮತ್ತು ಕ್ಷೇತ್ರದಲ್ಲಿ ನೆನೆಗುದಿಗೆ ಬಿದ್ದಿರುವ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಪೂರ್ಣಗೊಳಿಸಲು ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕೆಂದು ಕೋರಿದರು.

ವಿಧಾನಪರಿಷತ್ ಮಾಜಿ ಸದಸ್ಯ ಎನ್. ಅಪ್ಪಾಜೀಗೌಡ ಮಾತನಾಡಿ ರಾಜ್ಯದಲ್ಲಿ ಪ್ರಾದೇಶಿಕ ಪಕ್ಷದ ಉಳಿವಿಗಾಗಿ ಜೆಡಿಎಸ್ ಪಕ್ಷಕ್ಕೆ ಮತ ನೀಡುವ ಮೂಲಕ ಮತ್ತೊಮ್ಮೆ ಎಚ್.ಡಿ. ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸುವ ಪಣ ತೊಡಬೇಕೆಂದು ಮನವಿ ಮಾಡಿದರು.

ದೀನ ದಲಿತರ, ಅಲ್ಪಸಂಖ್ಯಾತರ, ರೈತರ ಕೂಲಿ ಕಾರ್ಮಿಕರ ಪಕ್ಷವಾಗಿರುವ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ತರಲು ರಾಜ್ಯದ ಜನರು ಉತ್ಸುಕರಾಗಿದ್ದು ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯನ್ನಾಗಿಸುವುದು ಜನರ ಆಸೆಯಾಗಿದ್ದು, ಇದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲವಾಗಿದ್ದು ಇದನ್ನರಿತು, ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಆಶೀರ್ವದಿಸಬೇಕೆಂದು ಕೋರಿದರು.

ಕಾಂಗ್ರೆಸ್ ಮತ್ತು ಬಿಜೆಪಿ ರಾಷ್ಟ್ರೀಯ ಪಕ್ಷಗಳು ಯಾವುದೇ ಯೋಜನೆಗಳನ್ನು ಘೋಷಣೆ ಮಾಡದೆ, ಕೇವಲ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ರಾಜ್ಯದ ಜನರನ್ನು ವಂಚಿಸುತ್ತಿದ್ದು ಪ್ರತಿ ಮನೆಯ ಕುಟುಂಬದವರಿಗೆ ಗ್ಯಾರೆಂಟಿ ಕಾರ್ಡ್ ಹಾಗೂ ಇನ್ನಿತರ ಯೋಜನೆಗಳನ್ನು ವಿತರಿಸಲು ಮುಂದಾಗಿರುವುದಕ್ಕೆ ಗ್ಯಾರೆಂಟಿ ಯಾರೆಂದು ಪ್ರಶ್ನಿಸಿದರು.

ಮಾಜಿ ಶಾಸಕ ಕೆ.ಟಿ. ಶ್ರೀಕಂಠೇಗೌಡ ಸಭೆ ಕುರಿತು ಮಾತನಾಡಿದ ಕಾರ್ಯಕ್ರಮದ ವೇಳೆ ಗೀತಾಸುರೇಶ್‌ಗೌಡ, ಧನ್ಯತಾಸುರೇಶ್‌ಗೌಡ, ಗ್ರಾ.ಪಂ. ಸದಸ್ಯರಾದ ಸುನಂದಮ್ಮ, ಆಶಾ, ಮುಖಂಡರಾದ ಸಿ.ಎಸ್. ಗೌಡ, ಪುಟ್ಟಸ್ವಾಮಿ, ಸಂತೋಷ್, ಈರಣ್ಣ, ಲಕ್ಷೀ ಚನ್ನರಾಜು, ಪ್ರಸಾದ್, ಮಧುಸೂದನ್, ರಮೇಶ್, ರಾಮಣ್ಣ, ಶೇಖರ್, ಜಯರಾಮು ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!