Wednesday, October 23, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜೂ.30ಕ್ಕೆ ಕೆಂಪೇಗೌಡರ 515 ಜಯಂತಿ ಆಚರಣೆ: ರವಿಕುಮಾರ್

ಮಂಡ್ಯ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಡ್ಯ ನಗರಸಭೆ ಸಂಯುಕ್ತಾಶ್ರಯದಲ್ಲಿ ನಾಡಪ್ರಭು ಕೆಂಪೇಗೌಡರ 515 ಜಯಂತಿ ಕಾರ್ಯಕ್ರಮವನ್ನು ಜೂ.30ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಡಾ.ಬಿ ಆರ್ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ರವಿಕುಮಾರ್ ಗಣಿಗ ತಿಳಿಸಿದರು.

ಮಂಡ್ಯ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಆದಿಚುಂಚನಗಿರಿ ಮಹಾಸಂಸ್ಥಾನ ಮಠ ಶಿಕ್ಷಣ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ  ದಿವ್ಯಸಾನಿಧ್ಯ ವಹಿಸಲಿದ್ದು, ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಉದ್ಘಾಟಿಸುವರು ಎಂದರು.

ಕಾರ್ಯಕ್ರಮದಲ್ಲಿ ಶಾಸಕರಾದ ರಮೇಶ್ ಬಾಬು, ಪಿಎಂ ನರೇಂದ್ರಸ್ವಾಮಿ, ದರ್ಶನ್ ಪುಟ್ಟಣ್ಣಯ್ಯ , ಹೆಚ್ ಟಿ ಮಂಜು, ಕೆಎಂ ಉದಯ್, ವಿಧಾನ ಪರಿಷತ್ ಸದಸ್ಯರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ, ಕೆ ವಿವೇಕಾನಂದ ಭಾಗವಹಿಸಲಿದ್ದು ಹಿರಿಯ ಸಾಹಿತಿ ಹಾಗೂ ಸಂಶೋಧಕ ತೈಲೂರು ವೆಂಕಟ ಕೃಷ್ಣ ಅವರು ಕೆಂಪೇಗೌಡರ ಬಗ್ಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ತಿಳಿಸಿದರು .

ಇದೇ ಸಂದರ್ಭದಲ್ಲಿ ಹತ್ತನೇ ತರಗತಿ ಮತ್ತಿ ದ್ವಿತೀಯ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿರುವ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು ಎಂದರು. ಇದೆ ಸಂದರ್ಭದಲ್ಲಿ ಕೆಂಪೇಗೌಡರ 515ನೇ ಜಯಂತಿಯ  ಪೋಸ್ಟರ್ ಬಿಡುಗಡೆ ಮಾಡಲಾಯಿತು.

ಗೋಷ್ಠಿಯಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್ ಕೃಷ್ಣ, ಮುಖಂಡರಾದ ಸುಜಾತ ಕೃಷ್ಣ, ನಾರಾಯಣ ಹಾಗೂ ಕೆ.ಸಿ.ರವೀಂದ್ರ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!