Thursday, June 13, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಮಂಡ್ಯ ಜಿಲ್ಲೆಯಲ್ಲಿ 5403 ಅರ್ಹ ಮತದಾರರು: ಡಾ.ಕುಮಾರ

ಕರ್ನಾಟಕ ವಿಧಾನ ಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ನಡೆಯುವ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ 5403 ಅರ್ಹ ಮತದಾರರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ರಾಜಕೀಯ ಪಕ್ಷದ ಮುಖಂಡರ ಸಭೆ ನಡೆಸಿ ಮಾತನಾಡಿದರು.

ಜೂನ್ 3 ರಂದು ಬೆಳಿಗ್ಗೆ 8 ರಿಂದ 4 ರವರೆಗೆ ಮತದಾನ ನಡೆಯಲಿದ್ದು. ಜೂನ್ 6 ರಂದು ಮತ ಎಣಿಕೆ ನಡೆಯಲಿದೆ, ಎಲ್ಲ ಚುನಾವಣೆ ಪ್ರಕ್ರಿಯೆಗಳು ಜೂನ್ 12 ರಂದು ಪೂರ್ಣಗೊಳ್ಳುತ್ತದೆ ಎಂದರು.

ದಕ್ಷಿಣ ಶಿಕ್ಷಕರ ಕ್ಷೇತ್ರದ‌ ವ್ಯಾಪ್ತಿಗೆ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳು ಒಳಪಡುತ್ತದೆ ಹಾಗೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾಧಿಕಾರಿಗಳಾಗಿರುತ್ತಾರೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಗಳಾಗಿರುತ್ತಾರೆ ಎಂದರು.

ಮಂಡ್ಯ ತಾಲ್ಲೂಕು ಕಚೇರಿಯಲ್ಲಿ ನೊಂದಣಿಯಾಗಿರುವ ಮತದಾರರ ಸಂಖ್ಯೆ ಹೆಚ್ಚಿದ್ದು, ತಾಲ್ಲೂಕು ಕಚೇರಿಯಲ್ಲಿ ಎರಡು ಮತ ಕೇಂದ್ರ ತೆರೆಯಲಾಗುವುದು. ಮಂಡ್ಯ ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧದಲ್ಲಿ ಒಂದು ಮತ ಕೇಂದ್ರ ಒಟ್ಟು 3 ಮತ ಕೇಂದ್ರಗಳು ಕಾರ್ಯನಿರ್ವಹಿಸಲಿದೆ. ಜಿಲ್ಲೆಯಲ್ಲಿ 9 ಮತಕೇಂದ್ರಗಳಿದ್ದು, ಅಂತಿಮ‌ ಮತದಾರರ ಪಟ್ಟಿಯ ಪ್ರಕಾರ 5403 ಮತದಾರರು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಣಿ ಮಾಡಿಕೊಂಡಿದ್ದಾರೆ ಎಂದರು.

ಕೆ ಆರ್ ಪೇಟೆ ಮಿನಿ ವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 327, ಹೆಣ್ಣು – 137 ಒಟ್ಟು 464 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ನಾಗಮಂಗಲ ಮಿನಿ ವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 296, ಹೆಣ್ಣು – 147, ಒಟ್ಟು – 443 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಪಾಂಡವಪುರ ಮಿನಿ ವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 260, ಹೆಣ್ಣು – 186, ಒಟ್ಟು – 446 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಮಂಡ್ಯ ಮಿನಿವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 573, ಹೆಣ್ಣು – 611, ಒಟ್ಟು – 1184, ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಮಂಡ್ಯ ತಾಲ್ಲೂಕು ಪಂಚಾಯತ್ ಸಾಮರ್ಥ್ಯ ಸೌಧ ಮತ ಕೇಂದ್ರದಲ್ಲಿ ಗಂಡು – 458, ಹೆಣ್ಣು -343, ಒಟ್ಟು -801, ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಮದ್ದೂರು ಮಿನಿ ವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 554, ಹೆಣ್ಣು – 413, ಒಟ್ಟು – 967 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಶ್ರೀರಂಗಪಟ್ಟಣ ಮಿನಿವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 207, ಹೆಣ್ಣು – 224, ಒಟ್ಟು – 431 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಮಳವಳ್ಳಿ ಮಿನಿವಿಧಾನಸೌಧ ಮತ ಕೇಂದ್ರದಲ್ಲಿ ಗಂಡು – 452, ಹೆಣ್ಣು – 215, ಒಟ್ಟು – 667 ಮತದಾರರು ಹೆಸರು ನೊಂದಾಯಿಸಿಕೊಂಡಿದ್ದಾರೆ.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ರಾಜಕೀಯ ಪಕ್ಷಗಳ ಮುಖಂಡರಾದ ಬೊಮ್ಮಯ್ಯ, ಮಂಜುನಾಥ್, ನವೀನ್, ದಿನೇಶ್, ರಮೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!