Friday, November 20, 2026

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಮಳವಳ್ಳಿ ತಾಲೂಕಿನಲ್ಲಿ 601 ಶಿಕ್ಷಕರಿಂದ ಮತದಾನ

ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮಳವಳ್ಳಿ ತಾಲ್ಲೂಕಿನ ಒಟ್ಟು 667 ಶಿಕ್ಷಕರ ಪೈಕಿ, 601 ಶಿಕ್ಷಕರು ಮತ ಚಲಾವಣೆ ಮಾಡಿದ್ದು, ಶೇ.90.10ರಷ್ಟು ಮತದಾನವಾಗಿದೆ.

ಮಳವಳ್ಳಿ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಯಾವುದೇ ಗೊಂದಲವಿಲ್ಲದೇ ಬಿರುಸಿನಿಂದ ಶಾಂತಿಯುತವಾಗಿ ಮತದಾನ ನಡೆಯಿತು, ಶಿಕ್ಷಕರು ಉತ್ಸಾಹದಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು. ಬೆಳಿಗ್ಗೆ 8 ಗಂಟೆಯಿಂದ ಮತದಾನದ ಪ್ರಕ್ರಿಯೆ ಆರಂಭಗೊಂಡು ಸಂಜೆ 4 ಗಂಟೆಗೆ ಮುಕ್ತಾಯಗೊಂಡಿತು.

ಕಂದಾಯ ಇಲಾಖೆಯಲ್ಲಿ ಒಂದು ಮತಗಟ್ಟೆಯನ್ನು ಸ್ಥಾಪಿಸಲಾಗಿತ್ತು. ಚುನಾವಣೆಯಲ್ಲಿ 10 ಸಿಬ್ಬಂದಿಗಳು ಕಾರ್ಯನಿರ್ವಹಿಸಿದರು. ಶಿಕ್ಷಕರು ಸರದಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು.

ಕಾಂಗ್ರೆಸ್, ಎನ್‌ಡಿಎ ಹಾಗೂ ಬಿಎಸ್‌ಪಿ ಮುಖಂಡರು ಹಾಗೂ ಕಾರ್ಯಕರ್ತರು ನಿಗಧಿತ ಸ್ಥಳದಲ್ಲಿ ಜಮಾವಣೆಗೊಂಡು ಮತದಾರರ ಮತದಾನಕ್ಕೆ ಆಗಮಿಸುವ ಸಂದರ್ಭದಲ್ಲಿ ತಮ್ಮ ಪಕ್ಷಕ್ಕೆ ಮತಹಾಕುವಂತೆ ಮನವಿ ಮಾಡಿಕೊಂಡರು.

ವಿಧಾನಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಮರಿತಿಬ್ಬೇಗೌಡರು ಮಳವಳ್ಳಿ ತಾಲ್ಲೂಕಿನವರೇ ಆಗಿರುವ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಮತ ಹಾಕುವಂತೆ ಕೋರಿದರು. ಬಿಎಸ್‌ಪಿ ಮುಖಂಡರು ಹ.ರಾ ಮಹೇಶ್ ಪರ ಮತಯಾಚಿಸಿದರೇ, ಎನ್‌ಡಿಎ ಅಭ್ಯರ್ಥಿ ಪರವಾಗಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಮತಯಾಚನೆ ಮಾಡಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ