Monday, November 23, 2026

ಪ್ರಾಯೋಗಿಕ ಆವೃತ್ತಿ

67ನೇ ಧಮ್ಮಚಕ್ರ ಪ್ರವರ್ತನ ದಿನ ಆಚರಣೆ

ಮಂಡ್ಯ ನಗರದ ಅಂಬೇಡ್ಕರ್ ಭವನದಲ್ಲಿ ಭಾರತೀಯ ಬೌದ್ಧ ಮಹಾಸಭಾದ ವತಿಯಿಂದ 67ನೇ ಧಮ್ಮಚಕ್ರ ಪ್ರವರ್ತನ ದಿನ ಆಚರಿಸಲಾಯಿತು.

ಭಾರತೀಯ ಬೌದ್ಧ ಮಹಾಸಭಾದ ಅಧ್ಯಕ್ಷ ಅನ್ನದಾನಿ ಮಾತನಾಡಿ, ಭಾರತ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಅ.14 ರಂದು ಬೌದ್ಧ ಧರ್ಮ ಸ್ವೀಕಾರ ಮಾಡಿದ ದಿನವನ್ನು ಧಮ್ಮಚಕ್ರ ಪ್ರವರ್ತನ ದಿನವನ್ನಾಗಿ ಆಚರಿಸುತ್ತಿದ್ದೇವೆ, ಅಂಬೇಡ್ಕರ್‌ 6 ಲಕ್ಷಕ್ಕೂ ಹೆಚ್ಚು ಜನರೊಡನೆ ಬೌದ್ಧ ಧಮ್ಮ ಸ್ವೀಕಾರ ಮಾಡಿದರು ಎಂದು ಹೇಳಿದರು.

ಅಂಬೇಡ್ಕರ್ ಅವರು ಬೌದ್ಧ ಧಮ್ಮಕ್ಕೆ ಮರಳಿ ಬಂದದ್ದು, ಸುಮ್ಮನೆ ಬರಲಿಲ್ಲ, ಹಿಂದೂ ಧರ್ಮದ ಎಲ್ಲವನ್ನೂ ಅಧ್ಯಯನ ಮಾಡಿ ಅರ್ಥಮಾಡಿಕೊಂಡು ಅವರ ಮನಸ್ಸನ್ನು ಪರಿವರ್ತನೆ ಮಾಡಲು ಸಾಧ್ಯವಿಲ್ಲ ಎಂದು ತಿಳಿದುಕೊಂಡರು, ಸಮಾಜವನ್ನು ಒಡೆಯುವುದೇ ಹಿಂದೂ ಧರ್ಮದ ಉದ್ದೇಶವಾಗಿದೆ, ಇದು ಇವರ ಮೂಲ ಸಂದೇಶವಾಗಿದೆ. ಹಿಂದೂ ಧರ್ಮವನ್ನು ಬಿಟ್ಟರೆ ಮಾತ್ರ ಒಗ್ಗಟ್ಟಾಗಿ ಬದುಕಲು ಸಾಧ್ಯ ಎಂದು ಹೇಳಿದ್ದರು ಎಂದರು.

ಕಾರ್ಯಕ್ರಮದಲ್ಲಿ ಭಾರತೀಯ ಬೌದ್ಧ ಮಹಾಸಭಾ ಉಪಾಧ್ಯಕ್ಷ ಎಸ್‌.ಸಿದ್ದರಾಜು, ಎಚ್‌.ಕೆ.ಚಂದ್ರಹಾಸ್‌, ಪ್ರಧಾನ ಕಾರ್ಯದರ್ಶಿ ನಾರಾಯಣಸ್ವಾಮಿ, ಪದಾಧಿಕಾರಿಗಳಾದ ಸಿದ್ದಪ್ಪ, ರಾಮಕೃಷ್ಣ, ಚಂದ್ರಶೇಖರ್ ಸೇರಿದಂತೆ ಇತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ