Friday, September 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಕೇಂಬ್ರಿಡ್ಜ್ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮದ್ದೂರು ತಾಲ್ಲೂಕಿನ ಭಾರತೀನಗರದ ಕೇಂಬ್ರಿಡ್ಜ್ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಸಂಭ್ರಮ ಸಡಗರದಿಂದ ಜರುಗಿತು.

ಶಾಲೆಯ ಮುಖ್ಯಾಡಳಿತಾಧಿಕಾರಿ ನಾಗರತ್ನ ಬಲ್ಲೇಗೌಡ ಮಾತನಾಡಿ, ವಿದ್ಯಾರ್ಥಿಗಳು ದೇಶಾಭಿಮಾನದ ಜೊತೆಗೆ ಮಹಾತ್ಮರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದರು. ರಾಷ್ಟ್ರಕ್ಕೆ ಸ್ವಾತಂತ್ರ್ಯ ನೀಡಿದ ಮಹನೀಯರ ಆದರ್ಶ ಗುಣಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಂಡು ದೇಶಕ್ಕೆ ತಮ್ಮದೆಯಾದ ಕಾಣಿಕೆಯನ್ನು ನೀಡಬೇಕೆಂದರು.

nudikarnataka.com

ಶಾಲೆಯ ಸಂಸ್ಥಾಪಕ ಅಧ್ಯಕ್ಷ ಎ.ಟಿ.ಬಲ್ಲೇಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಇದೇ ವೇಳೆ ನಿವೃತ್ತ ಯೋಧ ಛತ್ರದಹೊಸಹಳ್ಳಿ ಭೀರೇಶ್ ಹಾಗೂ ಹಿರಿಯರಾದ ಮಾಯಣ್ಣಗೌಡ ಅವರನ್ನು ಅಭಿನಂದಿಸಲಾಯಿತು.

ಜಾಹೀರಾತು

ಎಸ್ಎಸ್ಎಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಲಾಯಿತು. ಮಕ್ಕಳ ಸಂಸದರ ಚುನಾವಣೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಪದಗ್ರಹಣ ಹಾಗೂ ಪ್ರಮಾಣ ವಚನ ಮಾಡಲಾಯಿತು. ವಿದ್ಯಾರ್ಥಿಗಳು ವಿವಿಧ ವೇಷಭೂಷಣಗಳನ್ನು ತೊಟ್ಟು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ವಿವಿಧ ಸ್ಪಧರ್ೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯಶಿಕ್ಷಕಿ ನಯನ, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ಸುವರ್ಣ ಗಣಪತಿಭಟ್, ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ರಾಜಶೇಖರ್, ಹಿರಿಯ ಪತ್ರಕರ್ತರಾದ ಜಗದೀಶ್, ಪರಿಸರ ಜಾಗೃತಿ ವೇದಿಕೆಯ ತಾಲ್ಲೂಕು ಅಧ್ಯಕ್ಷ ಅಣ್ಣೂರು ಸತೀಶ್, ಶಿಕ್ಷಕರಾದ ನವೀನ್, ಕರುಣಾಮೂರ್ತಿ, ವಿಶ್ವ, ಸಂಜೀವ್, ಸಿದ್ದರಾಮು, ನಟರಾಜು, ದಿನೇಶ್, ಗೌರಮ್ಮ, ತಾರಾ, ನೇತ್ರಾವತಿ, ವಿಮಲ, ವಿಶಾಲಕ್ಷಿ, ಗೌತಮಿ, ದಿವ್ಯ, ಪುಪ್ಪ, ರಾಣಿ, ಆಶಾ, ನಿರ್ಮಲ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!