Thursday, November 19, 2026

ಪ್ರಾಯೋಗಿಕ ಆವೃತ್ತಿ

ಪರಿಷತ್ ಚುನಾವಣೆ ನಂತರ 7 ನೇ ವೇತನ ಆಯೋಗದ ವರದಿ- ಒಪಿಎಸ್ ಜಾರಿ: ಚಲುವರಾಯಸ್ವಾಮಿ

ವಿಧಾನ ಪರಿಷತ್ ಚುನಾವಣೆಯ ನಂತರ ರಾಜ್ಯದಲ್ಲಿ ಶಿಕ್ಷಕರಿಗೆ ಅನುಕೂಲವಾಗಿರುವ 7 ನೇ ವೇತನ ಆಯೋಗದ ವರದಿ ಹಾಗೂ ಹಳೆ ಪಿಂಚಣೆ ಯೋಜನೆ (ಒಪಿಎಸ್) ಯನ್ನು ಜಾರಿ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ 7ನೇ ವೇತನ ಆಯೋಗದ ವರದಿ, ಒಪಿಎಸ್ ಜಾರಿ ಮಾಡುವುದಾಗಿ ಭರವಸೆ ನೀಡಿದ್ದೇವೆ, ಅದರಂತೆ ಚುನಾವಣೆ ಮುಕ್ತಾಯವಾದ ನಂತರ ಜಾರಿ ಕ್ರಮ ಕೈಗೊಳ್ಳಲಾಗುವುದೆಂದರು.

ಮರಿತಿಬ್ಬೇಗೌಡರನ್ನು ಬೆಂಬಲಿಸಿ

ಜೂನ್ 3ರಂದು ನಡೆಯಲಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮರಿತಿಬ್ಬೇಗೌಡ ಅವರಿಗೆ ಶಿಕ್ಷಕ ಬಂಧುಗಳು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಮರಿತಿಬ್ಬೆಗೌಡರು ಉತ್ತಮ ಕೆಲಸವನ್ನು ಮಾಡಿದ್ದಾರೆ. ಅವರು ಗೆದ್ದರೆ ವಿಧಾನ ಪರಿಷತ್ತಿನಲ್ಲಿ ಮಧು ಜಿ ಮಾದೇಗೌಡ ಅವರ ಜೊತೆ ಕೆಲಸ ಮಾಡಲು ಅನುಕೂಲ ಆಗುತ್ತದೆ. ಆದ್ದರಿಂದ ಶಿಕ್ಷಕ ಬಂಧುಗಳು ಮರಿ ತಿಬ್ಬೇ ಗೌಡರಿಗೆ ಮೊದಲ ಪ್ರಾಶಸ್ತ್ಯದ ಮತ ನೀಡವಂತೆ ಮನವಿ ಮಾಡಿದರು .

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮರಿತಿಬ್ಬೇ ಗೌಡರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ್ದಾರೆ. ಮೈಸೂರು, ಚಾಮರಾಜನಗರದಲ್ಲಿ ಸಚಿವ ಮಹದೇವಪ್ಪ ಅವರ ನೇತೃತ್ವದಲ್ಲಿ ಪ್ರಚಾರ ಕಾರ್ಯ ನಡೆಯುತ್ತಿದೆ .ಅಲ್ಲದೆ ಮಂಡ್ಯದಲ್ಲಿಯೂ ಎಲ್ಲರ ಸಹಕಾರದಿಂದ ಪ್ರಚಾರ ಕಾರ್ಯ ನಡೆಯುತ್ತಿದೆ ಎಂದರು .

ಐದು ಗ್ಯಾರಂಟಿಗಳ ಜೊತೆಗೆ ಸರ್ಕಾರ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಾಡುತ್ತಿದೆ. ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ, ಹೊಸ ಸಕ್ಕರೆ ಕಾರ್ಖಾನೆ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಗೋಷ್ಠಿಯಲ್ಲಿ ಶಾಸಕ ರವಿಕುಮಾರ್ ಗೌಡ ,ಮಾಜಿ ಶಾಸಕ ಎಂ ಶ್ರೀನಿವಾಸ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿಡಿ ಗಂಗಾಧರ್, ನಗರಸಭಾ ಸದಸ್ಯ ಶ್ರೀಧರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅಂಜನ ಶ್ರೀಕಾಂತ್ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ರುದ್ರಪ್ಪ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ