Tuesday, May 14, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| 7 ಜನ ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆ

ಮಂಡ್ಯ ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಸಲು 3 ನೇ ದಿನವಾದ ಇಂದು (01-04-2024) 7 ಅಭ್ಯರ್ಥಿಗಳಿಂದ 9 ನಾಮಪತ್ರ ಸಲ್ಲಿಕೆಯಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಹೆಚ್.ನಾರಾಯಣ – 1 ನಾಮಪತ್ರ, ಕರುನಾಡು ಪಾರ್ಟಿ ಅಭ್ಯರ್ಥಿಯಾಗಿ ಬೂದಯ್ಯಾ – 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚನ್ನಮಾಯಿಗೌಡ – 1 ನಾಮಪತ್ರ, ಉತ್ತಮ ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ಲೋಕೇಶ್ ಎಸ್ -1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಚಿಕ್ಕನಂಜಾಚಾರಿ – 1 ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ಶಂಭುಲಿಂಗೇಗೌಡ – 1 ನಾಮಪತ್ರ, ಭಾರತೀಯ ರಾಷ್ಟೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ – 3 ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಮೊದಲನೇ ದಿನದಿಂದ ಇಲ್ಲಿಯವರೆಗೆ ಒಟ್ಟು 10 ಅಭ್ಯರ್ಥಿಗಳಿಂದ 12 ನಾಮಪತ್ರ ಸಲ್ಲಿಕೆಯಾಗಿರುತ್ತದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!