Friday, September 20, 2024

ಪ್ರಾಯೋಗಿಕ ಆವೃತ್ತಿ

ದಕ್ಷಿಣ ಶಿಕ್ಷಕರ ಕ್ಷೇತ್ರ| ಮಂಡ್ಯ ಜಿಲ್ಲೆಯಲ್ಲಿ ಶೇ 91.60 ಮತದಾನ

ರಾಜ್ಯ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ಜಿಲ್ಲೆಯಲ್ಲಿ ಶೇ 91.60 ರಷ್ಟು ಮತದಾನವಾಗಿದೆ.

ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಹಾಸನ ಜಿಲ್ಲೆಗಳನ್ನು ಒಳಗೊಂಡಿರುವ ದಕ್ಷಿಣ ಶಿಕ್ಷಕರ ಕ್ಷೇತ್ರದ ಮತದಾನ ಶಾಂತಿಯುತವಾಗಿ ನಡೆದಿದೆ.

4,949 ಶಿಕ್ಷಕ ಮತದಾರರಿಂದ ಮತದಾನ

ಮಂಡ್ಯ ಜಿಲ್ಲೆಯ 5,403 ಶಿಕ್ಷಕ ಮತದಾರರ ಪೈಕಿ 4,949 ಮತದಾರರು ಹಕ್ಕು ಚಲಾಯಿಸಿದ್ದು ಅತ್ಯಧಿಕ ಮತದಾನ ನಡೆದಿದೆ. ಜಿಲ್ಲೆಯ 9 ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿ ಸಂಜೆ 4 ಗಂಟೆಗೆ ಮುಕ್ತಾಯವಾಯಿತು.

ಕ್ಷೇತ್ರ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಒಟ್ಟಾರೆ 11,998 ಪುರುಷರು, 9,550 ಮಹಿಳೆಯರು, ಒಬ್ಬರು ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಒಟ್ಟು 21,549 ಮತದಾರರು ಇದ್ದು, ಈ ಪೈಕಿ ಮೈಸೂರು-10,439, ಚಾಮರಾಜನಗರ-2,181, ಹಾಸನ- 3,526, ಮಂಡ್ಯ ಜಿಲ್ಲೆಯಲ್ಲಿ 5403 ಸುಶಿಕ್ಷಿತರು ಮತದಾರಿದ್ದರು.

ಕಾಂಗ್ರೆಸ್‌ನ ಮರಿತಿಬ್ಬೇಗೌಡ ಮತ್ತು ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ, ನಾಗೇಂದ್ರ ಬಾಬು (ಕೆಜೆಪಿ), ಮಾಜಿ ಶಾಸಕ ವಾಟಾಳ್ ನಾಗರಾಜ್ (ಕನ್ನಡ ಚಳವಳಿ ವಾಟಾಳ್ ಪಕ್ಷ), ಹಾಗೂ ಪಕ್ಷೇತರರಾದ ಅನಿಲ್ ಕುಮಾರ್, ಅಂಬರೀಷ್‌, ನಿವೃತ್ತ ಡಿಡಿಪಿಯು ನಾಗ ಮಲ್ಲೇಶ್‌, ನಿಂಗರಾಜು ಎಸ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಬಿಎಸ್ಪಿ ಬೆಂಬಲಿತ ಅಭ್ಯರ್ಥಿ ಹ.ರಾ ಮಹೇಶ್‌ ಹಾಗೂ ರಾಜು ಕೆ ಅವರು ಕಣದಲ್ಲಿದ್ದಾರೆ. ಜೂನ್ 6 ರಂದು ಫಲಿತಾಂಶ ಪ್ರಕಟವಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!