Thursday, November 19, 2026

ಪ್ರಾಯೋಗಿಕ ಆವೃತ್ತಿ

9185 ಮಂದಿಗೆ ಮಂಜುನಾಥ ಸ್ವಾಮಿಯ ದರ್ಶನ : ರಾಮಚಂದ್ರು

ಮಂಡ್ಯ ವಿಧಾನ ಸಭಾ ಕ್ಷೇತ್ರದ ಜನರಿಗೆ ಶ್ರೀಶಂಭು ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿ
ರುವ ಧರ್ಮಸ್ಥಳ ಯಾತ್ರೆಯಲ್ಲಿ ಇಲ್ಲಿಯವರೆಗೆ ಒಟ್ಟು 167 ಬಸ್ ಗಳಲ್ಲಿ 9185 ಮಂದಿಗೆ ಮಂಜುನಾಥ ಸ್ವಾಮಿಯ ದರ್ಶನ ಮಾಡಿಸಲಾಗಿದೆ ಎಂದು ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಹಾಗೂ ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ತಿಳಿಸಿದರು.

ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿರುವ ಶ್ರೀ ಶಂಭು ಧರ್ಮಯಾತ್ರೆಯ ಅಂಗವಾಗಿ ಮಂಡ್ಯ ನಗರದ ಸ್ವರ್ಣಸಂದ್ರದಲ್ಲಿ 2 ಬಸ್ ಗಳ ಮೂಲಕ ಜನರನ್ನು ಧರ್ಮಸ್ಥಳ ಯಾತ್ರೆಗೆ ಬೀಳ್ಕೊಟ್ಟು ಅವರು ಮಾತನಾಡಿದರು.

ಮುಂದಿನ ದಿನಗಳಲ್ಲೂ ಶ್ರೀ ಶಂಭು ಧರ್ಮಯಾತ್ರೆ ಮುಂದುವರೆಯಲಿದೆ. ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಸದೃಢವಾಗಿದೆ. ಈ ಹಿಂದಿನಿಂದಲೂ ಪಕ್ಷ ಜಿಲ್ಲೆಯಲ್ಲಿ ತನ್ನದೇ ಆದ ಅಸ್ತಿತ್ವವನ್ನು ಉಳಿಸಿಕೊಂಡಿದೆ. ಮುಂಬರುವ 2023 ರ ಚುನಾವಣೆಯಲ್ಲಿ ನಾನು ಜೆಡಿಎಸ್ ಪಕ್ಷ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಸಂಘಟನೆಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುತಿದ್ದೇನೆ,  ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ ಎಂದರು.

ಮುಂದಿನ 2023 ರ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಕ್ತಿ ಪ್ರದರ್ಶನ ನಡೆಯುತ್ತದೆ. ಜಿಲ್ಲೆಯಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರುತ್ತದೆ. ಹೆಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ನಾಡಿನ ಜನರ ಸೇವೆ ಮಾಡಲಿದ್ದಾರೆ ಎಂದರು.

ಇಂದು ಮಾರಗೌಡನಹಳ್ಳಿಯಿಂದ 4 ಬಸ್ಸುಗಳಲ್ಲಿ ನೂರಾರು ಜನರನ್ನು ಧರ್ಮಸ್ಥಳ ಯಾತ್ರೆಗೆ ರಾಮಚಂದ್ರು ಬೀಳ್ಕೊಟ್ಟರು

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಎಂ.ಆರ್.ಮಂಜು, ನಗರಸಭಾ ಮಾಜಿ ಸದಸ್ಯರಾದ ಪದ್ಮಾವತಿ, ಶೋಭ ಪುಟ್ಟಸ್ವಾಮಿ, ರವಿ, ಗೋವಿಂದಪ್ಪ ಹಾಗೂ ಸವಿತಾ ಮತ್ತಿತ್ತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ