Saturday, November 21, 2026

ಪ್ರಾಯೋಗಿಕ ಆವೃತ್ತಿ

11,133 ಪೌರಕಾರ್ಮಿಕರಿಗೆ ಖಾಯಂ ಭಾಗ್ಯ

ಕೋರೋನ ಸಾಂಕ್ರಾಮಿಕದ ಸಂಕಷ್ಟದ ಸಮಯದಲ್ಲಿ ಎಂದಿನಂತೆ ಸ್ವಚ್ಚತಾ ಕಾರ್ಯ ನಡೆಸಿದ 11,133 ಪೌರಕಾರ್ಮಿಕರನ್ನು ರಾಜ್ಯ ಸರ್ಕಾರ ಖಾಯಂಗೊಳಿಸಿ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ತೀರ್ಮಾನ ಕೈಗೊಂಡಿದೆ.

ವಿಶೇಷ ನೇಮಕಾತಿ ನಿಯಮಗಳ ಅಡಿ ಖಾಯಂ ನೌಕರರನ್ನಾಗಿ ನೇಮಕ ಮಾಡಿಕೊಳ್ಳಲು ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯಾಗಿತ್ತು. ಅದರಂತೆ ಸೆ.19ರಂದು ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಪೌರಕಾರ್ಮಿಕರನ್ನು ಖಾಯಂ ನೌಕರರನ್ನಾಗಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಈ ನೌಕರರಿಗೆ ಇನ್ನೂ ಮುಂದೆ 17,000-28,980 ರೂ.ಗಳ ವೇತನ ಶ್ರೇಣಿ ಅನ್ವಯವಾಗಲಿದೆ, ಪೌರ ಕಾರ್ಮಿಕರನ್ನು ಖಾಯಂಗೊಳಿಸುವಂತೆ  ಹಲವಾರು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬಂದಿದ್ದರು. ಆದರೆ ಸರ್ಕಾರ ಏಕಕಾಲದಲ್ಲಿ ಇಷ್ಟೊಂದು ನೌಕರರನ್ನು ಖಾಯಂ ಮಾಡುವ ಮೂಲಕ ಅವರಿಗೆ ಪೌರ ಕಾರ್ಮಿಕರಿಗೆ ನ್ಯಾಯ ದೊರಕಿಸಿ ಕೊಟ್ಟಿದೆ.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ