ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸರ್ಕಾರಿ ನೇಮಕಾತಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಲಕ್ಷಾಂತರ ಯುವಜನರ ಆಕ್ರೋಶದ ಅಲೆಗೆ ಬಿಜೆಪಿ ಕೊಚ್ಚಿ ಹೋಗಲಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡುವ ಶಕ್ತಿಯಿಲ್ಲದ ಬಡ ಉದ್ಯೋಗಕಾಂಕ್ಷಿಗಳು ತಮ್ಮ ಪೋಷಕರು ಬೆಳೆದ ಅಕ್ಕಿ, ರಾಗಿ, ಜೋಳ ಮುಂತಾದ ಬೆಳೆಗಳ ಗಂಟನ್ನು ನನ್ನ ಕೈಗಿತ್ತು ಸರ್ಕಾರಕ್ಕೆ ತಲುಪಿಸಿ, ಉದ್ಯೋಗ ಕೊಡಿಸಿ ಎಂದು ಕೋರಿದ್ದಾರೆ.
ಯುವ ಜನರ ಆಕ್ರೋಶದ ಅಲೆಗೆ ಭ್ರಷ್ಟ @BJP4Karnataka ಸರ್ಕಾರ ಕೊಚ್ಚಿ ಹೋಗುವ ದಿನ ದೂರವಿಲ್ಲ. pic.twitter.com/MI1j6mqqmQ— Siddaramaiah (@siddaramaiah) September 20, 2022
“>ನಿರುದ್ಯೋಗಿ ಪದವೀಧರರು ಮಂಗಳವಾರ ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಸರ್ಕಾರಿ ನೇಮಕಾತಿಯಲ್ಲಿ ನಡೆಯುತ್ತಿರುವ ಭ್ರಷ್ಠಾಚಾರ ಖಂಡಿಸಿ ಹಾಗೂ ಶೀಘ್ರ ನೇಮಕಾತಿಗಳನ್ನು ಪ್ರಾರಂಭಿಸಬೇಕೆಂದು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಿರುವ ಅವರು, ಟ್ವಿಟ್ ನಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಸರ್ಕಾರಿ ಉದ್ಯೋಗಗಳಿಗೆ ಲಂಚ ಕೊಡಲು ಶಕ್ತಿ ಇಲ್ಲದ ಉದ್ಯೋಗಾಕಾಂಕ್ಷಿಗಳು ಪೋಷಕರು ಬೆಳೆದ ಭತ್ತ, ರಾಗಿ, ಜೋಳಗಳ ಗಂಟನ್ನು ಕೈಗಿತ್ತು ಉದ್ಯೋಗ ಕೊಡಿಸಿ ಎಂದು ಕೋರಿದ್ಧಾರೆ. ಯುವಜನರ ಆಕ್ರೋಶದ ಅಲೆಗೆ ಸರ್ಕಾರವು ಕೊಚ್ಚಿ ಹೋಗುವ ದಿನಗಳು ದೂರವಿಲ್ಲ ಎಂದು ಅವರು ಟ್ವಿಟ್ಟಿಸಿದ್ದಾರೆ.




