ಬಿಎಂಶ್ರೀ ಪ್ರತಿಷ್ಠಾನದ `ಶ್ರೀಮತಿ ಸಾವಿತ್ರಮ್ಮ-ಪ್ರೊ.ಎಂ.ವಿ.ಸೀತಾರಾಮಯ್ಯ ಸಾಹಿತ್ಯ ಪುರಸ್ಕಾರ’ಕ್ಕೆ ಸಾಂಸ್ಕೃತಿಕ ಸಂಘಟಕರಾದ ಮತ್ತು ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷರಾದ ಪ್ರೊ.ಬಿ.ಜಯಪ್ರಕಾಶಗೌಡ ಅವರು ಆಯ್ಕೆಯಾಗಿದ್ದಾರೆ.
ಬೆಂಗಳೂರು ನಗರದ ಬಿಎಂಶ್ರೀ ಪ್ರತಿಷ್ಠಾನದ ಸಭಾಂಗಣದಲ್ಲಿ ಇದೇ ಸೆ.29ರಂದು ಜರುಗುವ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಪ್ರಶಸ್ತಿಯು 30 ಸಾವಿರ ರೂ. ನಗದು ಪುರಸ್ಕಾರ ಮತ್ತು ಸ್ಮರಣ ಫಲಕ ಒಳಗೊಂಡಿದೆ ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.




