ಮನುಷ್ಯನ ದೈಹಿಕ-ಮಾನಸಿಕ ಸಮತೋಲನ ಕಾಪಾಡಿಕೊಳ್ಳುವಂತೆ ಮಾಡುವ ಮೂಲಕ ಕ್ರೀಡೆ ಉತ್ತಮ ಔಷಧವಾಗಿ ಕೆಲಸ ಮಾಡುತ್ತದೆ ಎಂದು ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು ಅಭಿಪ್ರಾಯ ವ್ಯಕ್ತಪಡಿಸಿದರು.
ಮಂಡ್ಯದ ಸರ್.ಎಂ.ವಿ. ಕ್ರೀಡಾಂಗಣದಲ್ಲಿ ನಗರಸಭೆ ವತಿಯಿಂದ ಪೌರಕಾರ್ಮಿಕರ ದಿನಾಚರಣೆ ಪ್ರಯುಕ್ತ ನಡೆದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಅವರು
ಮಾತನಾಡಿದರು.
ನಗರವನ್ನು ಸ್ವಚ್ಛಗೊಳಿಸಿ ಸುಂದರವಾಗಿ ನೋಡಿಕೊಳ್ಳುತ್ತಿರುವಂತಹ ಪೌರಕಾರ್ಮಿಕರ ಸೇವೆ ಶ್ಲಾಘನೀಯ ಎಂದರು.
ಪ್ರತಿದಿನ ಕೆಲಸ ಮಾಡುವ ಪೌರಕಾರ್ಮಿಕರು ಕ್ರೀಡೆಯಲ್ಲಿ ತೊಡಗಿಕೊಂಡು ಸಂತೋಷ ಪಡಬೇಕು ಎಂಬ ಉದ್ದೇಶದಿಂದ ಪೌರಕಾರ್ಮಿಕ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಏರ್ಪಡಿಸಲಾಗಿದೆ ಎಂದರು.
ಕ್ರೀಡೆಯಿಂದ ಮನುಷ್ಯನಿಗೆ ಬಹಳ ಸಂತೋಷ ಸಿಗುತ್ತದೆ. ಹಾಗಾಗಿ ಪೌರಕಾರ್ಮಿಕರು ಸಹ ಈ ದಿನ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷೆ ಮೀನಾಕ್ಷಿ ಪುಟ್ಟಸ್ವಾಮಿ, ಆಯುಕ್ತ ಆರ್. ಮಂಜುನಾಥ್, ಪರಿಸರ ಅಭಿಯಂತರ ರುದ್ರೇಗೌಡ, ಎಇಇ ರವಿಕುಮಾರ್, ಆರೋಗ್ಯ ಪರಿವೀಕ್ಷಕ ಚೆಲುವರಾಜು ಇನ್ನಿತರರು ಉಪಸ್ಥಿತರಿದ್ದರು.




