Friday, November 20, 2026

ಪ್ರಾಯೋಗಿಕ ಆವೃತ್ತಿ

ಆಹಾರದ ಕಿಟ್ ವಿತರಣೆ

ಮದ್ದೂರು ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾ.ಪಂ.ವ್ಯಾಪ್ತಿಯಲ್ಲಿ ಸಾಕಷ್ಟು ಜನರು ಸಂಕಷ್ಟದಿಂದ ಬಳಲುತ್ತಿದ್ದು,  ಅನಾರೋಗ್ಯ ದಿಂದ ಬಳಲುತ್ತಿದ್ದ ಕುಟುಂಬಕ್ಕೆ ಉಚಿತವಾಗಿ ಆಹಾರ ಕಿಟ್ ಗಳನ್ನು ಕೃಷ್ಣೇಗೌಡ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿತರಣೆ ಮಾಡಲಾಯಿತು.

ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ನಂದೀಶ್ ಗೌಡ, ಸಂಕಷ್ಟದಲ್ಲಿರುವವರಿಗೆ ಸಹಾಯ ಮಾಡುವ ಅವಕಾಶ ಸಿಕ್ಕಿದ್ದು ಪುಣ್ಯದ ಕೆಲಸ ಎಂದರು.

30 ಕ್ಕೂ ಅಧಿಕ ಅನಾರೋಗ್ಯ ಪೀಡಿತ ಕುಟುಂಬಗಳಿಗೆ ಆಹಾರದ ಕಿಟ್ ವಿತರಿಸಲಾಯಿತು

ಕಾರ್ಯಕ್ರಮದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರ ಲೀಲಾವತಿ, ತಾಲ್ಲೂಕು ಆಸ್ಪತ್ರೆ ಅಪ್ತ ಸಮಾಲೋಚಿಕಿ ಪುಷ್ಪ,ಯುವಜನ ಮತ್ತು ಅಭಿವೃದ್ಧಿ ಸಂಸ್ಥೆಯ ಬಿ‌ ಪಿ ಗಿರೀಶ್. ಕಾರ್ಯಕರ್ತೆರಾದ ಸೌಮ್ಯ, ಪವಿತ್ರ ಹಾಗೂ ಶ್ರುತಿ  ಹಾಜರಿದ್ದರು

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ