ಸರ್ಕಾರಿ ಶಾಲೆಗಳ ಅಭಿವೃದ್ದಿಗೆ ಸ್ಥಳೀಯರ ಸಹಕಾರ ಅಗತ್ಯ ಎಂದು ಜಿಲ್ಲಾ ಬಿಜೆಪಿ ನಗರ ಮೋರ್ಚಾ ಅಧ್ಯಕ್ಷ ವಿವೇಕ್ ಹೇಳಿದರು.
ನಗರದ ವಿದ್ಯಾನಗರದಲ್ಲಿರುವ ಜಿಜೆಎಂಎಸ್ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾ ಬಿಜೆಪಿ 4ನೇ ಮಹಾಶಕ್ತಿ ಕೇಂದ್ರ ಆಯೋಜಿಸಿದ್ದ ಸೇವಾ ಸಪ್ತಾಹ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ನೋಟ್ಬುಕ್ ವಿರತಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಇಂದಿನ ಶೈಕ್ಷಣಿಕ ಸ್ಪಾರ್ಧಾತ್ಮಕ ಜಗತ್ತಿನಲ್ಲಿ ನಗರ-ಗ್ರಾಮೀಣ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆಗಳ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳು ಸಂಖ್ಯೆ ವೃದ್ಧಿಗೆ ಎಲ್ಲರ ಸಹಕಾರ ಅತ್ಯಗತ್ಯ, ಗುಣಮಟ್ಟದ ವಾತಾವರಣ, ಸರ್ಕಾರಿ ಸೌಲಭ್ಯಗಳು, ಉತ್ತಮ ಶಿಕ್ಷಕರು ಇರುವಂತ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕಿದೆ ಎಂದು ನುಡಿದರು.
ನಗರಸಭಾ ಸದಸ್ಯ ಶಿವಕುಮಾರ ಕೆಂಪಯ್ಯ ಮಾತನಾಡಿದರು. ಇದೇ ಸಂಧರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಗಣ್ಯರು ವಿವಿಧ ಪರಿಕರಗಳನ್ನು ವಿತರಿಸಿದರು. ಪೌಷ್ಠಿಕ ಆಹಾರ ವಿತರಣೆ ಕಾರ್ಯವು ನಡೆಯಿತು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯ ಪ್ರಸನ್ನ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಸಿದ್ದರಾಜು, ಆನಂದ, ಪುಟ್ಟಸ್ವಾಮಿ ಮತ್ತಿತರರಿದ್ದರು.




