Friday, November 20, 2026

ಪ್ರಾಯೋಗಿಕ ಆವೃತ್ತಿ

ಡಾ.ಹೆಚ್.ಡಿ.ಚೌಡಯ್ಯ ಪ್ರಶಸ್ತಿಗಳ ಪ್ರದಾನ

ಮಂಡ್ಯದ ಜನತಾ ಶಿಕ್ಷಣ ಟ್ರಸ್ಟ್ ವತಿಯಿಂದ ಡಾ.ಹೆಚ್.ಡಿ.ಚೌಡಯ್ಯನವರ 95ನೇ ಜನ್ಮ ದಿನೋತ್ಸವ ಹಾಗೂ 2022ನೇ ಸಾಲಿನ ರಾಜ್ಯಮಟ್ಟದ ಡಾ.ಹೆಚ್.ಡಿ.ಚೌಡಯ್ಯ ಸಹಕಾರ, ಸಮಾಜಸೇವೆ ಮತ್ತು ಗ್ರಾಮೀಣಾಭಿವೃದ್ಧಿ ಪ್ರಶಸ್ತಿಗಳ ಪ್ರದಾನ ಹಾಗೂ ಪ್ರತಿಭಾ ವಿದ್ಯಾರ್ಥಿ ಪುರಸ್ಕಾರ ಸಮಾರಂಭ ಸೆ.28ರಂದು ಬೆಳಿಗ್ಗೆ 11 ಗಂಟೆಗೆ ಮಂಡ್ಯನಗರದ ಕೆ.ವಿ.ಶಂಕರಗೌಡ ತರಬೇತಿ ಮತ್ತು ಉದ್ಯೋಗ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ ಎಂದು ಪಿಇಟಿ ಟ್ರಸ್ಟಿನ ಧರ್ಮದರ್ಶಿ ಡಾ.ರಾಮಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಿಇಟಿ ಅಧ್ಯಕ್ಷ ಕೆ.ಎಸ್.ವಿಜಯ್ ಆನಂದ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್‌.ನಾಗರಾಜು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಪಿಇಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್, ಧರ್ಮದರ್ಶಿ ಹೆಚ್.ಸಿ.ಮೋಹನ್ ಕುಮಾರ್ ಉಪಸ್ಥಿತರಿರುವರು ಎಂದರು.

ಮೂವರಿಗೆ ಡಾ.ಹೆಚ್.ಡಿ.ಚೌಡಯ್ಯ ಪ್ರಶಸ್ತಿ

 

 

 

ರಾಜ್ಯ ಮಾರಾಟ ಮಹಾಮಂಡಲದ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರಕುಮಾರ್  ಅವರಿಗೆ ಸಹಕಾರ ಕ್ಷೇತ್ರ, ಎಸ್.ಬಿ.ಏಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಮೀರಾ ಶಿವಲಿಂಗಯ್ಯ ಅವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಹಾಗೂ ಗೊರವನಹಳ್ಳಿ ಗ್ರಾಮ ಪಂಚಾಯಿತಿಯ ಜಿ.ಬಿ.ಶಂಕರೇಗೌಡ ಅವರಿಗೆ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಡಾ.ಹೆಚ್.ಡಿ.ಚೌಡಯ್ಯ ಅವರ ಹೆಸರಿನಲ್ಲಿ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು ಎಂದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಹೆಚ್.ಕೆ.ಸತ್ಯಮೂರ್ತಿ, ಕು.ವಿಸ್ಮಯ, ದಿಶಾ ಹಾಗೂ ಭುವನ್ ಸಿ.ಎಸ್.ಅವರಿಗೆ ಪ್ರತಿಭಾ ವಿದ್ಯಾರ್ಥಿ ಪ್ರಶಸ್ತಿ ನೀಡಿ ಗೌರವಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಪಿಇಟಿ ಕಾರ್ಯದರ್ಶಿ ಎಸ್.ಎಲ್.ಶಿವಪ್ರಸಾದ್ ಉಪಸ್ಥಿತರಿದ್ದರು.

 

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ