Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಸ್ವಸ್ಥ

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆರೋಗ್ಯದಲ್ಲಿ ಏರುಪೇರಾಗಿದ್ದು, ಅಸ್ವಸ್ಥ ಗೊಂಡಿರುವ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಸ್. ಎಂ.ಕೃಷ್ಣ ಅವರಿಗೆ ಶನಿವಾರ ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಹಳೇ ಮದ್ರಾಸ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ಕಳೆದ ರಾತ್ರಿಯೇ ದಾಖಲಿಸಲಾಗಿದೆ.

ಕೃಷ್ಣ ಅವರಿಗೆ ತೀವ್ರವಾದ ಉಸಿರಾಟದ ಸೋಂಕು ಇದೆ ಎಂದು ತಿಳಿದು ಬಂದಿದ್ದು, ಮೈಸೂರಿನ ಡಾ. ಸತ್ಯನಾರಾಯಣ ಮತ್ತು ಡಾ. ಸುನೀಲ್ ಕಾರಂತ್ ಅವರ ನೇತೃತ್ವದ ತಂಡ ಚಿಕಿತ್ಸೆ ನೀಡುತ್ತಿದೆ. ತೀವ್ರ ನಿಗಾ ಮತ್ತು ವಿಶೇಷ ವೈದ್ಯಕೀಯ ತಂಡದ ಆರೈಕೆಯಲ್ಲಿ ಕೃಷ್ಣ ಇದ್ದಾರೆ.

ಎಸ್.ಎಂ. ಕೃಷ್ಣ ಅವರಿಗೆ ಕೋವಿಡ್ ಮತ್ತು ಜ್ವರಕ್ಕೆ ಸಂಬಂಧಿಸಿದ ಕೆಲವು ಪರೀಕ್ಷೆ ಮಾಡಲಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಕೃಷ್ಣರವರ ಆರೋಗ್ಯ ಸ್ಥಿರವಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ