ಮಂ
ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳಿದ್ದರೆ ಸಾರ್ವಜನಿಕರು ನೀಡಬಹುದು, ಈ ಕುಂದುಕೊರತೆ ಸಭೆಯಲ್ಲಿ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಪುಟ್ಟಮಾದಯ್ಯ, ಡಿವೈಎಸ್ಪಿ ಟಿ.ಆರ್. ರಾಜಶೆಟ್ಟಿ ಮತ್ತು ಪೊಲೀಸ್ ಇನ್ಸ್ಪೆಕ್ಟರ್ ಜಿ.ಕೆ.ಪ್ರಕಾಶ್ ಪಾಲ್ಗೊಳಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು, ಅಹವಾಲು ಗಳೇನಾದರೂ ಇದ್ದಲ್ಲಿ ಖುದ್ದಾಗಿ ಭೇಟಿ ಮಾಡಿ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತದ ಮಂಡ್ಯ ಉಪಾಧೀಕ್ಷಕ ಟಿ.ಆರ್.ರಾಜಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.