Friday, November 20, 2026

ಪ್ರಾಯೋಗಿಕ ಆವೃತ್ತಿ

ದೇವಾಲಯದ ಆವರಣದಲ್ಲಿ ಸ್ವಚ್ಛತಾ ಸೇವಾ ಆಂದೋಲನ

ಮಂಡ್ಯ ತಾಲ್ಲೂಕಿನ ಸಂತೆಕಸಲಗೆರೆ ಗ್ರಾಮ ಪಂಚಾಯಿತಿಯ ಪುರಾಣ ಪ್ರಸಿದ್ಧ ಐತಿಹಾಸಿಕ ಸ್ಥಳವಾದ ಭೂಮಿಸಿದ್ದೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಹಾಗೂ ದುಷ್ಪರಿಣಾಮಗಳ ಕುರಿತಾದ ಜಾಗೃತಿ ಕಾರ್ಯಕ್ರಮ ನಡೆಯಿತು.

ಮೊರಾರ್ಜಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮೂಲದಲ್ಲಿಯೇ ಹಸಿ-ಒಣ ಕಸ ಹಾಗೂ ಅಪಾಯಕಾರಿ ತ್ಯಾಜ್ಯ ಮತ್ತು ದ್ರವ ತ್ಯಾಜ್ಯಕ್ಕೆ ಸಂಬಂಧಿಸಿದಂತೆ ಹೆಚ್.ಆರ್.ಡಿ. ಸಮಾಲೋಚಕ ಚನ್ನೇಗೌಡ ಹಾಗೂ ಎಸ್.ಹೆಚ್.ಸಮಾಲೋಚಕ ತಮ್ಮಣ್ಣ ಮಾಹಿತಿಯನ್ನು ನೀಡಿದರು.

ಹದಿನೈದು ದಿನಗಳ ಈ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಇಡೀ ರಾಷ್ಟ್ರದ್ಯಂತ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ಸ್ವಚ್ಛತೆಗೆ ಸಂಬಂಧಿಸಿದಂತೆ ಕಲ್ಯಾಣಿಗಳನ್ನು ಶುಚಿಗೊಳಿಸಿಳುವುದು, ದೇವಾಲಯಗಳನ್ನು ಸ್ವಚ್ಛಗೊಳಿಸುವುದು, ಪುರಾತನ ಐತಿಹಾಸಿಕ ಕಟ್ಟಡಗಳ ಸ್ವಚ್ಛತೆ, ಕುಡಿಯುವ ನೀರಿನ ಮೂಲಗಳ ಸುತ್ತ ಸ್ವಚ್ಛತೆ, ಪ್ರವಾಸಿ ತಾಣಗಳ ಸ್ವಚ್ಛತೆ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಇಂತಹ ಸ್ಥಳಗಳನ್ನು ಶ್ರಮದಾನದ ಸ್ವಚ್ಛ ಸುಂದರ ಗ್ರಾಮಗಳನ್ನಾಗಿ ಮಾಡುವ ಉದ್ದೇಶದಿಂದ ಈ ಅಭಿಯಾನವನ್ನು ಕೈಗೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸೌಮ್ಯ ನಟರಾಜು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರವಿ, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಸಮಾಲೋಚಕ ಶಿವಕುಮಾರ್, ಗ್ರಾ.ಪಂ.ಸಿಬ್ಬಂದಿಗಳಾದ ಈರಣ್ಣ ಹಾಗೂ ಚೌಡೇಶ್, ಮೊರಾರ್ಜಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ, ಉಪನ್ಯಾಸಕರು, ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ