Thursday, November 19, 2026

ಪ್ರಾಯೋಗಿಕ ಆವೃತ್ತಿ

ಕ್ರೈಸ್ಥರ ಅಭಿವೃದ್ಧಿಗೆ ಬಿಜೆಪಿ ಒತ್ತು

ಹೆಚ್ಚು ಅನುದಾನ ನೀಡುವ ಮೂಲಕ ಬಿಜೆಪಿ ಸರ್ಕಾರವು ಕ್ರೈಸ್ಥರ ಅಭಿವೃದ್ಧಿಗೆ ಒತ್ತು ನೀಡಿದೆ ಎಂದು ಕ್ರಿಶ್ಚಿಯನ್ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆನಡಿ ಶಾಂತಕುಮಾರ್ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕ್ರಿಶ್ಚಿಯನ್ನರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಲು ಪ್ರಾರಂಭಿಸಿದರು. ಪ್ರಸ್ತುತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 200 ಕೋಟಿ ಅನುದಾನ ನೀಡಿದ್ದಾರೆ.

ರಾಜ್ಯದಲ್ಲಿ ಧರ್ಮ ಸಂರಕ್ಷಣೆ ಕಾಯ್ದೆ ಜಾರಿಯಾಗಿದೆಯೇ ಹೊರತು ಮತಾಂತರ ನಿಷೇಧ ಕಾಯ್ದೆ ಜಾರಿಯಾಗಿಲ್ಲ, ಭಾರತ ಸಂವಿಧಾನದ ಪ್ರಕಾರ ಒಬ್ಬ ವ್ಯಕ್ತಿಯೂ ಯಾವುದೇ ಧರ್ಮವನ್ನು ಒಪ್ಪಿ ಆಚರಣೆ ಮಾಡುವುದಕ್ಕೆ ಅವಕಾಶವಿದೆ. ಆದರೆ ಬಲವಂತವಾಗಿ ಯಾವುದೆ ಧರ್ಮಕ್ಕೆ ಮತಾಂತರ ಮಾಡುವುದನ್ನು ಖಂಡಿಸುತ್ತೇವೆ ಎಂದರು.

ಗೋಷ್ಟಿಯಲ್ಲಿ ಬಿಜೆಪಿ ಮುಖಂಡರಾದ ಸಿ.ಟಿ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ