ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀರುವಳ್ಳಿ ಗ್ರಾಮದ ನಿವಾಸಿ ನೀಲಶೆಟ್ಟಿ ಎಂಬುವವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ ಗ್ರಾಮಕ್ಕೆ ಭೇಟಿ ನೀಡಿ, ಮೃತನ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.
ನೊಂದವರ ಜೊತೆ ಸದಾಕಾಲ ಇದ್ದು, ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ತಾಲೂಕಿನಾದ್ಯಂತ ಮನೆ ಮಾತಾಗಿರುವ ಸಮಾಜ ಸೇವಕ ಮಿತ್ರ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬೂಕನಕೆರೆ ವಿಜಯ್ ರಾಮೇಗೌಡ ಅವರು ತಾಲ್ಲೂಕಿಗೆ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆಯ ವಿಷಯ. ಅದೇ ರೀತಿ ಇಂದು ನೀಲಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಹಣ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ ಎಂದು ಅಗ್ರಹಾರಬಾಚಹಳ್ಳಿ ಗ್ರಾ.ಪಂ.ಮಾಜಿ ಸದಸ್ಯ ಎ.ಬಿ.ಕುಮಾರ್ ಹೇಳಿದರು.




