ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆ ಮಂಡ್ಯ ಜಿಲ್ಲೆಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕ ಪ್ರಿಯಾ ಕೃಷ್ಣ ಗುರುವಾರ ಮಂಡ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಭಾರತ ಜೋಡೋ ಯಾತ್ರೆಯು ಅ.3,6 ಹಾಗೂ 7ರಂದು ಮಂಡ್ಯ ಜಿಲ್ಲೆಯಲ್ಲಿ ಸಂಚರಿಸಲಿದೆ, ಹಾಗಾಗಿ ಆಗಮಿಸಿ ಪ್ರಿಯಾ ಕೃಷ್ಣ ಅವರನ್ನು ಮಂಡ್ಯ ಜಿಲ್ಲಾ ಕಾಂಗ್ರೆಸ್ ಮುಖಂಡರು ಪುಷ್ಪಮಾಲೆ ಹಾಕಿ ಸ್ವಾಗತಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕ ರಾಹುಲ್ ಗಾಂಧಿ ಅವರು ಅ.6ರಂದು ಯಾತ್ರೆ ನಡೆಸುವ ಮಾರ್ಗದ ಪರಿಶೀಲನೆ ನಡೆಸಲು ಬಂದಿದ್ದೇನೆ ಎಂದರು.
ಐತಿಹಾಸಿಕ ಭಾರತ್ ಜೋಡೋ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಮುಖಂಡ ಸುಂಡಹಳ್ಳಿ ಮಂಜುನಾಥ್ ಸೇರಿದಂತೆ ಇತರರು ಹಾಜರಿದ್ದರು.




