Friday, November 20, 2026

ಪ್ರಾಯೋಗಿಕ ಆವೃತ್ತಿ

ಪಶುಪಾಲನಾ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಒತ್ತಾಯ

ಮಂಡ್ಯ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪಶು ಸಂಗೋಪನಾ ಸಚಿವ ಪ್ರಭು ಬಿ.ಚವ್ಹಾಣ್ ಅವರಿಗೆ ಆಗ್ರಹಿಸಿದ್ದಾರೆ.

ಮಂಡ್ಯ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 855 ಹುದ್ದೆಗಳು ಮಂಜೂರಾಗಿರುತ್ತವೆ. ಇವುಗಳಲ್ಲಿ ಸುಮಾರು 443 ವಿವಿಧ ಹುದ್ದೆಗಳು ಖಾಲಿಯಿವೆ. ಈ ಹುದ್ದೆಗಳ ತುಂಬಲು ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿದ್ದರೂ ಸಹ ಇದುವರೆವಿಗೂ ಈ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇಲಾಖೆಯಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಿಬ್ಬಂದಿಗಳು ಇಲ್ಲದ ಕಾರಣ ಸ್ಥಳೀಯ ರೈತರು ಸಾಕುತ್ತಿರುವ  ಪ್ರಾಣಿಗಳಿಗೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದೆ ಮರಣ ಹೊಂದುತ್ತಿವೆ. ಆದ್ದರಿಂದ ಸರ್ಕಾರ ಕೂಡಲೇ ಖಾಲಿಯಿರುವ 443 ವಿವಿಧ ವೃಂದದ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡುವಂತೆ ಸಂಬಂಧಿಸಿದವರಿಗೆ ಆದೇಶಿಸಬೇಕೆಂದು ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಚಿವರಿಗೆ ಪತ್ರದಲ್ಲಿ ವಿವರಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ