Friday, November 20, 2026

ಪ್ರಾಯೋಗಿಕ ಆವೃತ್ತಿ

ಸರ್ಕಾರಿ ಶಾಲೆಯ ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ

ಸರ್ಕಾರಿ ಶಾಲೆಯ ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ಧಾರೆ, ಸಾಧನೆಗೆ ಛಲದ ಅವಶ್ಯಕತೆ ಇದೆ ಎಂದು ಗ್ರಾ.ಪಂ. ಅಧ್ಯಕ್ಷ ಎಚ್.ಡಿ.ರವಿ ಹೇಳಿದರು.

ಮಂಡ್ಯ ತಾಲೂಕಿನ ಹೊಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಎಚ್.ಎ. ಕೀರ್ತಿ ಅಡೆತಡೆ ಓಡ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟದಿಂದ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಅವರನ್ನು ಅಭಿನಂದಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚು ಹೆಚ್ಚಾಗಿ ಸ್ಪರ್ಧಿಸಿ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತರಬೇಕು. ಗ್ರಾಮ ಪಂಚಾಯಿತಿ ವತಿಯಿಂದ ಸಿಗಬಹುದಾದ ಸೌಲಭ್ಯಗಳನ್ನು ಕೀರ್ತಿ ಅವರಿಗೆ ಒದಗಿಸಿಕೊಡುವುದಾಗಿ ಭರವಸೆ ನೀಡಿದರು.

ಶಾಲೆಯ ಮುಖ್ಯ ಶಿಕ್ಷಕ ಬಿ.ಬಸವರಾಜು, ತಾಲ್ಲೂಕು ಕಾರ‍್ಯದರ್ಶಿ ಎ.ಚಿಕ್ಕೇಗೌಡ, ದೈಹಿಕ ಶಿಕ್ಷಣ ಶಿಕ್ಷಕಿ ಕೆ.ಜೆ. ರತ್ನ ಹಾಗೂ ಶಾಲಾ ಶಿಕ್ಷಕರು ಹಾಜರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ