Friday, September 20, 2024

ಪ್ರಾಯೋಗಿಕ ಆವೃತ್ತಿ

ದಾಖಲೆ ಪ್ರಮಾಣದ ರಕ್ತ ಸಂಗ್ರಹಿಸಿ ಇತಿಹಾಸ ನಿರ್ಮಾಣ

✍🏿 ಪ್ರಭು ವಿ.ಎಸ್, ಮದ್ದೂರು


ಶಿವಪುರ ಸತ್ಯಾಗ್ರಹ ಸೌಧ ಇಂದು ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿ

270 ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರಹಿಸಿ ದಾಖಲೆ


ಸ್ವಾತಂತ್ರ್ಯ ಹೋರಾಟಕ್ಕೆ ಮುನ್ನುಡಿ ಬರೆದು ಇತಿಹಾಸ ಸೃಷ್ಟಿಸಿದ ಶಿವಪುರ ಸತ್ಯಾಗ್ರಹ ಸೌಧ ಇಂದು ಮತ್ತೊಂದು ಐತಿಹಾಸಿಕ ಘಟನೆಗೆ ಸಾಕ್ಷಿಯಾಯಿತು.

ಮದ್ದೂರು ತಾಲ್ಲೂಕಿನ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟ ಹಾಗೂ ರಕ್ತನಿಧಿ ಕೇಂದ್ರ ಮಿಮ್ಸ್ ವತಿಯಿಂದ 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವ,ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಶಿವಪುರದ ಧ್ವಜ ಸತ್ಯಾಗ್ರಹ ಸೌಧದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರಕ್ಕೆ ತಹಶೀಲ್ದಾರ್ ನರಸಿಂಹಮೂರ್ತಿಯವರು ಸ್ವತಃ ರಕ್ತದಾನ ಮಾಡುವುದರ ಮೂಲಕ ಚಾಲನೆ ನೀಡಿದರು.

ಇಂದು ಬೆಳಿಗ್ಗೆಯಿಂದ ಆರಂಭವಾದ ರಕ್ತದಾನ ಕಾರ್ಯಕ್ರಮಕ್ಕೆ ನಿರೀಕ್ಷೆ ಮೀರಿ ಮದ್ದೂರು ತಾಲೂಕಿನ ವಿವಿಧ ಗ್ರಾಮಗಳ ಯುವಕರು ಉತ್ಸಾಹದಿಂದ ರಕ್ತದಾನ ಮಾಡಿದರು.

ಇಂದು ಬೆಳಿಗ್ಗೆ ಶಾಸಕ ಡಿ.ಸಿ,ತಮ್ಮಣ್ಣ ಧ್ವಜ ಸತ್ಯಾಗ್ರಹ ಸೌಧದ ಆವರಣದಲ್ಲಿ ಧ್ವಜಾರೋಹಣ ನೆರವೇರೆಸಿ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಭಾವಚಿತ್ರಕ್ಕೆ ಪುಪ್ಪಾರ್ಚನೆ ಸಲ್ಲಿಸಿ ಇಬ್ಬರು ಮಹನೀಯರ ಜಯಂತಿ ಆಚರಣೆಗೆ ಚಾಲನೆ ನೀಡಿದರು.

ತಾಲೂಕಿನ ಎಲ್ಲಾ ಸಂಘ ಸಂಸ್ಥೆಗಳ ಒಕ್ಕೂಟದಿಂದ ಬೃಹತ್ ರಕ್ತದಾನ ಶಿಬಿರ ಆಯೋಜಿಸಿ ರಕ್ತ ಸಂಗ್ರಹಿಸುವ ಕಾರ್ಯ ಶ್ಲಾಘನೀಯ. ಇಂತಹ ಸಮಾಜಮುಖಿ ಕೆಲಸಕ್ಕೆ ಮುಂದಾದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ನುಡಿದರು.

ಮನ್ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಸಮಾಜ ಸೇವಕ ಕದಲೂರು ಉದಯ್, ಆರ್.ಕೆ. ವಿದ್ಯಾಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ್, ಸಿರಿ ಆದರ್ಶ ಚಿಟ್ ಫಂಡ್ ಸಂಸ್ಥೆ ಮುಖ್ಯಸ್ಥ ಆದರ್ಶ್ ಸೇರಿದಂತೆ ತಾಲ್ಲೂಕಿನ ಎಲ್ಲಾ ಸಂಘಟನೆ ಮುಖಂಡರು ಭಾಗಿಯಾಗಿ ರಕ್ತದಾನ ಶಿಬಿರಕ್ಕೆ ಭೇಟಿ ನೀಡಿ ಮಹಾ ರಕ್ತದಾನಿಗಳಿಗೆ ಶುಭ ಕೋರಿದರು.

ಕಾರ್ಯಕ್ರಮ ಆಯೋಜಿಸಿದ್ದ ತಾಲ್ಲೂಕಿನ ಎಲ್ಲಾ ಸಂಘಟನೆ ಕಾರ್ಯಕರ್ತರು ಭಾಗಿಯಾಗಿ ಸ್ವತಃ ರಕ್ತದಾನ ಮಾಡಿ ಸಂತೋಷ ವ್ಯಕ್ತಪಡಿಸಿದರು.

ಒಟ್ಟಾರೆ 270 ಕ್ಕೂ ಅಧಿಕ ಯೂನಿಟ್ ರಕ್ತ ಸಂಗ್ರಹಿಸಿ ದಾಖಲೆ ಬರೆದರು. ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘದ ಸಹಾಯಕರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!