Thursday, November 19, 2026

ಪ್ರಾಯೋಗಿಕ ಆವೃತ್ತಿ

ಮೈಸೂರಿಗೆ ಸೋನಿಯಾ ಭೇಟಿ : ಬಿರುಸುಗೊಂಡ ರಾಜಕೀಯ

ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅವರು ಕರ್ನಾಟಕದ ಮೈಸೂರಿಗೆ ಬಂದಿಳಿದಿದ್ದು, ದೆಹಲಿಯ ರಾಜಕೀಯವು ಈಗ ಕರ್ನಾಟಕದ ನೆಲೆದಲ್ಲಿ ಬಿರುಸುಗೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಸೋಮವಾರ ಮಧ್ಯಾಹ್ನ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ ಮೂಲಕ ಬಂದಿಳಿರುವ ಸೋನಿಯಾ ಗಾಂಧಿ ಅವರನ್ನು  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ  ಕಾಂಗ್ರೆಸ್ ಮುಖಂಡರು ಸ್ವಾಗತಿಸಿದರು.

ಪೂರ್ವ ನಿಗಧಿಯಂತೆ ಮಡಿಕೇರಿಯಲ್ಲಿ ಸೋನಿಯಾ ಗಾಂಧಿ ಅವರು ವಾಸ್ತವ್ಯ ಹೂಡಬೇಕಾಗಿತ್ತು. ಆದರೆ ಹವಾಮಾನ ವೈಪರಿತ್ಯದಿಂದಾಗಿ ಹೆಚ್.ಡಿ.ಕೋಟೆಯ ಕಬಿನಿ ರೆಸಾರ್ಟ್ ನಲ್ಲಿ ಅವರು ಉಳಿದುಕೊಂಡಿದ್ದಾರೆ.

ರಾಜಕೀಯ ಚಟುವಟಿಕೆ 

ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಖ್ಯಾತ ಲೇಖಕ ಹಾಗೂ ಕಾಂಗ್ರೆಸ್ ಸಂಸದ ಶಶಿ ತರೂರ್ ಸ್ಪರ್ಧೆ ಮಾಡಿದ್ದು, ಅಂತಿಮ ಕಣದಲ್ಲಿ ಉಳಿದಿದ್ದಾರೆ. ಅ.17ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೆಹಲಿಯ ರಾಜಕೀಯ ಕರ್ನಾಟಕಕ್ಕೆ ಸ್ಥಳಾಂತರಗೊಂಡಂತಾಗಿದೆ.

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷ ಗಾದಿಯಲ್ಲಿ ಕೂರಿಸಲು ಆಸಕ್ತಿ ಹೊಂದಿದ್ದಾರೆ ಎನ್ನಲಾಗಿದೆ. ಇದಕ್ಕೆ ಮಾಡಬೇಕಾಗಿರುವ ಕಾರ್‍ಯತಂತ್ರಗಳ ಬಗ್ಗೆ ಕಾಂಗ್ರೆಸ್ ನಾಯಕರ  ಜೊತೆ ಸೋನಿಯಾ ಅವರು ಮಾತುಕತೆ  ನಡೆಸಲಿದ್ದಾರೆ.

ನಾಳೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖ ನಾಯಕರು ಸೊನೀಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಭಾರತ ಜೋಡೋ ಯಾತ್ರೆಯಲ್ಲಿ ಭಾಗಿ : 

ಆಯುಧಪೂಜೆ ಹಾಗೂ ವಿಜಯದಶಮಿ ಹಿನ್ನಲೆಯಲ್ಲಿ ಅ.4 ಮತ್ತು 5 ರಂದು ಭಾರತ ಜೋಡೋ ಯಾತ್ರೆಗೆ ಬಿಡುವು ಇರಲಿದ್ದು, ಅ.6ರಂದು ಪಾಂಡವಪುರದಿಂದ ಮತ್ತೆ ಪ್ರಾರಂಭವಾಗುವ ಯಾತ್ರೆಯಲ್ಲಿ ಸೋನಿಯಾಗಾಂಧಿ ಹಾಗೂ ಅವರ ಪುತ್ರಿ ಪ್ರಿಯಾಂಕ ಗಾಂಧಿ ಅವರು ರಾಹುಲ್ ಗಾಂಧಿ ಅವರ ಜೊತೆಯಲ್ಲಿ ಹೆಜ್ಜೆ ಹಾಕಲಿದ್ದಾರೆಂದು ಕಾಂಗ್ರೆಸ್ ನ ಮೂಲಗಳು ತಿಳಿಸಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ