Friday, November 20, 2026

ಪ್ರಾಯೋಗಿಕ ಆವೃತ್ತಿ

ಬೀದಿ ನಾಟಕ-ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ 

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2022-23ನೇ ಸಾಲಿನಲ್ಲಿ ಮಂಡ್ಯ  ಜಿಲ್ಲಾ ವ್ಯಾಪ್ತಿಯಲ್ಲಿ ಸರ್ಕಾರಿ ಕಾರ್ಯಕ್ರಮಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆಮಾಡಲು ಅರ್ಜಿ ಆಹ್ವಾನಿಸಿದೆ.

ಜಿಲ್ಲೆಯಿಂದ 3 ಬೀದಿ ನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಲಾಗುತ್ತದೆ. ಪ್ರತಿ ಬೀದಿ ನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕು, ಅದರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದ ಕಲಾವಿದರಾಗಿರಬೇಕು. ಮತ್ತು ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಒಬ್ಬರು ಮಹಿಳೆ ಹಾಗೂ ಒಬ್ಬರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಠ ಪಂಗಡಕ್ಕೆ ಸೇರಿದವರಾಗಿರಬೇಕು.

ಮಂಡ್ಯ ಜಿಲ್ಲೆಯ ಆಸಕ್ತ ಕಲಾತಂಡಗಳು ಅಕ್ಟೋಬರ್ 17 ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಹಾಯಕ ನಿರ್ದೇಶಕರು,  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹೆಚ್.ಕೆ.ವೀರಣ್ಣ ಗೌಡ ರಸ್ತೆ, ಮಂಡ್ಯ- 571401 ಇಲ್ಲಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಮೊ. 9341993898  ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ