Friday, November 20, 2026

ಪ್ರಾಯೋಗಿಕ ಆವೃತ್ತಿ

ಜನರ ಸಬಲೀಕರಣವೇ ನರೇಗಾದ ಉದ್ದೇಶ

ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗೆ ಜೀವನೋಪಾಯದ ಸುರಕ್ಷಿತ ಮೂಲವನ್ನು ಒದಗಿಸಿ, ಸಮಾಜದ ಹಿಂದುಳಿದ ವರ್ಗದ ಆರ್ಥಿಕ ಸ್ಥಿತಿಯನ್ನು ಹೆಚ್ಚಿಸಿ, ಜನರನ್ನು ಸಬಲೀಕರಣಗೊಳಿಸುವುದು ನರೇಗಾ ಯೋಜನೆಯ ಮಹತ್ವದ ಉದ್ದೇಶವಾಗಿದೆ ಎಂದು ಪಿಡಿಒ ರಾಜು ಹೇಳಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಚಿಕ್ಕಮುಲಗೂಡು ಗ್ರಾ.ಪಂ.ನಲ್ಲಿ 39 ಗ್ರಾಮ ಪಂಚಾಯತಿ ವ್ಯಾಪ್ತಿಯ ಜಾಬ್ ಕಾರ್ಡ್ ಮೇಳದಲ್ಲಿ ಭಾಗವಹಿಸಿ ಜಾಬ್ ಕಾರ್ಡ್ ವಿತರಣೆ ಮಾಡಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶಗಳಿಂದ ಕೆಲಸದ ಕೊರತೆಯಿಂದ ನಗರ ವಲಸೆಯನ್ನು ಕಡಿಮೆ ಮಾಡುವುದು. ಗ್ರಾಮ ಪಂಚಾಯತಿಯನ್ನು ಬಲಪಡಿಸುವುದು ಈ ಕಾರ್ಯಕ್ರಮದ ಉದ್ದೇಶ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಚಿಕ್ಕಮುಲಗೂಡು ಗ್ರಾ.ಪಂ. ಅಧ್ಯಕ್ಷ ಯೋಗೇಶ್ ಮಾತನಾಡಿ, ವಿಕಲಚೇತನರಿಗೆ ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಅನುಕಂಪಕ್ಕಿಂತ ಅವಕಾಶಗಳನ್ನು ಮಾಡಿಕೊಟ್ಟಿದೆ ನರೇಗಾ ಹಾಗೂ ಅವರು ಸ್ವಯಂ ಉದ್ಯೋಗ ಕೈಗೊಂಡು ತಮ್ಮ ಕಾಲ ಮೇಲೆ ತಾವು ನಿಲ್ಲಬಹುದು, ಹಾಗಾಗಿ ವಿಕಲಚೇತನರಿಗೆ ಉದ್ಯೋಗ ಖಾತರಿ ಯೋಜನೆಯಡಿ ವೈಯಕ್ತಿಕ ಕಾಮಗಾರಿ ತೆಗೆದುಕೊಳ್ಳಲು ಅವಕಾಶವಿದೆ ಎಂದು ಹೇಳಿದರು.

ನಂತರ ಮಾತನಾಡಿದ ತಾಲ್ಲೂಕು ಐಇಸಿ ಸಂಯೋಜಕರು ಉದ್ಯೋಗ ಚೀಟಿಯನ್ನು ಪಡೆದರೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯಲ್ಲಿ 100  ದಿನ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಯಲ್ಲಿ ಕೆಲಸ ಪಡೆಯಬಹುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ